ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಒಟ್ಟು 13 ಮುಖಂಡರು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಮ್ಮ ಪಕ್ಷದ ನಾಯಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದ ಬೆನ್ನಲ್ಲೇ ಬಿಜೆಪಿಯ ಐಟಿ ವಿಭಾಗಕ್ಕೆ ಸೇರಿದ 13 ಮುಖಂಡರು ಎಐಎಡಿಎಂಕೆ ಸೇರಿದ್ದಾರೆ.
ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಬರಸು ಅವರು ಹೇಳಿದ್ದಾರೆ.
ಇದನ್ನೂ ಓದಿ: ಚಳಿ, ಕೇಕ್ ಮತ್ತು ಮುದ್ದಾಟ; ವಿದೇಶದಲ್ಲಿ ಬರ್ತಡೇ ಆಚರಿಸಿಕೊಂಡ ರಾಧಿಕಾ ಪಂಡಿತ್
ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಅವರು ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದಾರೆ.
என்னால் முடிந்த வரை பல சங்கடங்களை கடந்து கடந்த 1.5 ஆண்டுகளாக பயணித்தேன்!
உண்மையாக நேர்மையாக உழைத்தேன், வேதனை மட்டுமே மிச்சம்!
விடைபெறுகிறேன் 🙏 pic.twitter.com/jcXAtJroid
— CTR.Nirmal kumar (@CTR_Nirmalkumar) March 5, 2023
ಪಾಕ್ ಆಕ್ರಮಿತ ಕಾಶ್ಮೀರದ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿನಿಯರಿಗೆ ಹಿಜಾಬ್ ಕಡ್ಡಾಯ!