More

    ಡೇಟಾ ಸೈನ್ಸ್ ವಿಭಾಗದಲ್ಲಿ ಹೆಚ್ಚು ಉದ್ಯೋಗಾವಕಾಶ

    ಮೈಸೂರು: ನಗರದ ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್‌ನಲ್ಲಿ ಅಲ್ಪಾವಧಿ ತರಬೇತಿ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
    ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದಲ್ಲಿ ಡೇಟಾ ಮಾಡೆಲಿಂಗ್ ಮತ್ತು ಆಪ್ಟಿಮೈಸೇಷನ್ ಕುರಿತು 5 ದಿನಗಳ ಅಲ್ಪಾವಧಿ ತರಬೇತಿ ನೀಡಲಾಗುವುದು. ಯುಎಸ್‌ಎ ಒಕ್ಲಹೋಮ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಲಕ್ಷ್ಮೀವರಹನ್ ತರಬೇತಿಗೆ ಚಾಲನೆ ನೀಡಿ ಮಾತನಾಡಿ, ಇಂದು ಡೇಟಾ ಸೈನ್ಸ್ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿದ್ದು, ಯುವ ಸಮೂಹವನ್ನು ಆಕರ್ಷಿಸುತ್ತಿದೆ. ಇದರಿಂದ ಉದ್ಯೋಗಾವಕಾಶವೂ ಲಭಿಸುತ್ತದೆ ಎಂದರು.
    ಈ ಕೋರ್ಸ್ ಗಣಿತದ ವಿವಿಧ ಬಗೆಯ ತಂತ್ರಗಳನ್ನು ವಿವರಿಸುತ್ತದೆ. ದತ್ತಾಂಶ ವಿಜ್ಞಾನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಂಶೋಧನಾ ವಿಧಾನದಲ್ಲೂ ತ್ವರಿತ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.
    ವಿದ್ಯಾವರ್ಧಕ ಸಂಘದ ಖಜಾಂಚಿ ಶ್ರೀಶೈಲ ರಾಮಣ್ಣನವರ್, ವಿವಿಸಿಇ ಪ್ರಾಂಶುಪಾಲ ಡಾ.ಬಿ.ಸದಾಶಿವೇಗೌಡ, ಡೀನ್ ಡಾ.ಬಿ.ಸಿ. ಅಶೋಕ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಎಂ.ಆರ್.ಪೂಜಾ, ಡಾ.ವಿ.ರವಿಕುಮಾರ್, ಡಾ.ವಿನುತಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts