ಸರ್ಕಾರಿ ಶಾಲೆಗೆ 100 ಕ್ಕೂ ಹೆಚ್ಚು ಮಕ್ಕಳು ದಾಖಲು

blank

ಹುಣಸೂರು: ನಗರದ ಪೊಲೀಸ್ ಠಾಣೆ ಹಿಂಭಾಗವಿರುವ ಶತಮಾನಗಳ ಇತಿಹಾಸ ಹೊಂದಿರುವ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರವೇಶಾತಿಯನ್ನು ಸೋಮವಾರ ಆರಂಭಿಸಲಾಗಿದ್ದು, ಮೊದಲ ದಿನವೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ.

ಪಾಲಕರ ಸಹಕಾರದೊಂದಿಗೆ ನಿರ್ವಹಣೆ ಮಾಡುತ್ತಿರುವ ಎಲ್‌ಕೆಜಿಗೆ(ಆಂಗ್ಲ ಮಾಧ್ಯಮ)30 ವಿದ್ಯಾರ್ಥಿಗಳು, ಯುಕೆಜಿಗೆ 25 ಮತ್ತು ಒಂದನೇ ತರಗತಿಗೆ 42 ಮಕ್ಕಳು ಪ್ರವೇಶ ಪಡೆದಿದ್ದಾರೆಂದು ಈ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ (ಎಲ್.ಆರ್.ಶಿವರಾಮೇಗೌಡ ಬಣ)ದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವ ಹಂತದಲ್ಲಿದ್ದ 150 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯನ್ನು ದಾನಿಗಳು, ಹಳೆಯ ವಿದ್ಯಾರ್ಥಿಗಳು ಸರ್ಕಾರೇತರ ಸಂಘ ಸಂಸ್ಥೆಗಳ ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ಉಳಿಸಿಕೊಳ್ಳಲಾಗಿದೆ ಎಂದಿದ್ದಾರೆ.

500ಕ್ಕೂ ಹಚ್ಚು ವಿದ್ಯಾರ್ಥಿಗಳು ಇದೀಗ ವ್ಯಾಸಂಗ ಮಾಡುತ್ತಿದ್ದು, ಪ್ರಸಕ್ತ ಸಾಲಿಗಾಗಿ ಪ್ರವೇಶಾತಿಯನ್ನು ಈಗಿಂದಲೇ ಆರಂಭಿಸಲಾಗಿದೆ. ಸರ್ಕಾರಿ ಶಾಲೆಯಲ್ಲೂ ಪ್ರವೇಶಾತಿ ಆರಂಭವಾಗುವುದು ಜೂನ್ ತಿಂಗಳಿಂದ. ಆದರೆ ಈ ಶಾಲೆಯಲ್ಲಿ ತಮ್ಮ ಮಕ್ಕಳನ್ನು ಸೇರಿಸಲು ಪಾಲಕರು ಉತ್ಸಾಹದಿಂದ ಮುಂದೆ ಬರುತ್ತಿದ್ದು, ಮೊದಲ ದಿನವೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶಪಡೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಪ್ರಸಕ್ತ ಸಾಲಿಗಾಗಿ 350ಕ್ಕೂ ಹೆಚ್ಚು ನೂತನ ಪ್ರವೇಶಾತಿ ಆಗಬೇಕೆಂಬ ಗುರಿ ಹೊಂದಲಾಗಿದ್ದು, ಗುರಿ ತಲುಪಿದಲ್ಲಿ ಈಗಾಗಲೇ 1 ಕೋಟಿ ರೂ.ವೆಚ್ಚದಡಿ 6 ಸ್ಮಾರ್ಟ್‌ಕ್ಲಾಸ್‌ಗಳನ್ನು ನಿರ್ಮಿಸಿಕೊಟ್ಟಿರುವ ಒಸಾಟ್ ಸಂಸ್ಥೆ ಹೆಚ್ಚುವರಿಯಾಗಿ ಮತ್ತೆ 6 ಕೊಠಡಿಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದೆ. ನಮ್ಮ ನಿರೀಕ್ಷೆಯಂತೆ ಪ್ರವೇಶಾತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಮಾತನಾಡಿ, ಉತ್ತಮ ಸಂಪನ್ಮೂಲ ವ್ಯಕ್ತಿಗಳಾಗಿ ಮುಖ್ಯಶಿಕ್ಷಕ ಡಾ.ಮಾದುಪ್ರಸಾದ್ ಮತ್ತವರ ತಂಡದ ಅತ್ಯುತ್ತಮ ಕಾರ್ಯನಿರ್ವಹಣೆಯಿಂದಾಗಿ ಇದು ಸಾಧ್ಯವಾಗಲಿದೆ ಎಂದರು.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…