More

    12ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

    ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಂಕಿ ತಗುಲಿ 12 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಆಹುತಿಯಾಗಿದೆ.

    ಬೆಳಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಅರಣ್ಯ ಪ್ರದೇಶದ ಎತ್ತರದ ಭಾಗದಲ್ಲಿ ಬೆಂಕಿ ಹೊತ್ತಿರುವುದು ಕಾಣಿಸಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಳಿಕ 70ಕ್ಕೂ ಹೆಚ್ಚು ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

    15 ದಿನದ ಹಿಂದೆಯೂ ಈ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮೇಲ್ನೊಟಕ್ಕೆ ಈ ಕೃತ್ಯ ಕಿಡಿಗೇಡಿಗಳಿಂದ ನಡೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts