More

    ಭೀಕರ ಬೋಟ್​ ದುರಂತಕ್ಕೆ ಹಲವು ಮಕ್ಕಳು ಸೇರಿದಂತೆ 21ಕ್ಕೂ ಹೆಚ್ಚು ಬಲಿ

    ಮಲಪ್ಪುರಂ: ಕೇರಳದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ನದಿಯಲ್ಲಿ ತೆರಳುತ್ತಿದ್ದ ಡಬಲ್​ ಡೆಕ್ಕರ್​ ಬೋಟ್​ ಮಗುಚಿ ಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ 21ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಮಲಪ್ಪುರಂ ಜಿಲ್ಲೆಯ ಥೂವಲ್​ ಜಿಲ್ಲೆಯ ತಾನೂರ ಬಳಿ ಘಟನೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.


    ಸ್ಥಳೀಯ ಪೊಲೀಸರ ಪ್ರಕಾರ, ಬೋಟ್​ ನಲ್ಲಿ ಒಟ್ಟು 40ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಪೊಲೀಸರು ಹಾಗೂ ಮೀನುಗಾರರು ಕಾರ್ಯಚರಣೆಯಲ್ಲಿ ತೊಡಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

    ಇದನ್ನೂ ಓದಿ: ರಾಜ್ಯಕ್ಕೆ ಸವದತ್ತಿ ವಿದ್ಯಾರ್ಥಿನಿ  ಪ್ರಥಮ


    ಕೇರಳ ಮುಖ್ಯಮಂತ್ರಿ ಪಿನರಾಯ್​ ವಿಜಯನ್ ಸಂತಾಪ ವ್ಯಕ್ತಪಡಿಸಿದ್ದು, “ಮಲಪ್ಪುರಂನ ತಾನೂರ್ ದೋಣಿ ಅಪಘಾತದ ಸಾವಿನ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದೇನೆ. ದುಃಖತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ಹೃತ್ಪೂರ್ವಕ ಸಂತಾಪ” ಎಂದು ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.


    ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳೇ ಆಗಿದ್ದು, ಶಾಲೆಗೆ ರಜೆಯಿದ್ದ ಕಾರಣ ಬೋಟ್​ ಸವಾರಿ ಮಾಡಲು ಬಂದಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಪೊಲೀಸರು ಈ ಕುರಿತು ತನಿಖೆ ನಡೆಸಲಿದ್ದಾರೆ. ಅಲ್ಲದೇ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. (ಏಜೆನ್ಸೀಸ್​)

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts