More

    ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ; ಕರೊನಾ ಗುಣಮುಖರಿಗೆ ಇಎನ್​ಟಿ ತಪಾಸಣೆಗೆ ಸೂಚನೆ

    ಬೆಂಗಳೂರು : ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂಧ್ರ) ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಇದಕ್ಕೆ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಅದರೊಂದಿಗೆ 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಬ್ಲ್ಯಾಕ್​ ಫಂಗಸ್​​ ಚಿಕಿತ್ಸೆಯ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲ ಜಿಲ್ಲೆಗಳಲ್ಲೂ ಚಿಕಿತ್ಸೆಯ ಅನುಕೂಲ ಇದೆ. ಆದರೆ ಔಷಧಿಗೆ ಸ್ವಲ್ಪ ಕೊರತೆ ಇದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಚರ್ಚಿಸಲಾಗಿದ್ದು, ಹೆಚ್ಚಿನ ಔಷಧಿ ಲಭಿಸುವ ನಿರೀಕ್ಷೆ ಇದೆ ಎಂದರು.

    ಇದನ್ನೂ ಓದಿ: ಮಾಂಸ ಕಡಿಯುವ ಕತ್ತಿಯಿಂದ ಅಣ್ಣ ಅತ್ತಿಗೆಯನ್ನು ಕೊಚ್ಚಿದ; ಪುಟ್ಟ ಕಂದಮ್ಮನನ್ನೂ ಬಿಡಲಿಲ್ಲ…

    ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಸಹಜವಾಗಿ ಕಂಡುಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರ 1 ಸಾವಿರಕ್ಕೂ ಅಧಿಕ ವಯಲ್​​ಗಳನ್ನು ಕಳುಹಿಸಿಕೊಡುವ ನಿರೀಕ್ಷೆಯೂ ಇದೆ. ಈವರೆಗೆ 1,150 ವಯಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವಯಲ್​​ಗೆ ಬೇಡಿಕೆ ಇಡಲಾಗಿದೆ ಎಂದರು.

    ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ರಚಿಸಿದ್ದ ಸಮಿತಿಯು ವರದಿ ನೀಡಿದೆ. ಸ್ಟೀರಾಯಿಡ್​ನ ಅತಿಬಳಕೆ, ಹ್ಯುಮಿಡಿಫೈರ್​​ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್​​ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘ ಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ತಿಳಿಸಲಾಗಿದೆ.

    ಇದನ್ನೂ ಓದಿ: ಊಟ ಸೇವಿಸದೆ ಸೋಂಕಿತರ ಪ್ರತಿಭಟನೆ : ಹೊನ್ನಾನಾಯಕನಹಳ್ಳಿ ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆಗೆ ಆಕ್ರೋಶ

    ಬ್ಲ್ಯಾಕ್​ ಫಂಗಸ್​ಅನ್ನು ತಡೆಗಟ್ಟುವ ಬಗೆಯನ್ನೂ ವರದಿಯಲ್ಲಿ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಎಲ್ಲಾ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು. ಕೋವಿಡ್​​ನಿಂದ ಗುಣಮುಖರಾದಾಗ ಇಎನ್​​ಟಿ ವೈದ್ಯರು ತಪಾಸಣೆ ಮಾಡಬೇಕು. ಗುಣಮುಖರಾದ 3ನೇ ದಿನ, 7ನೇ ದಿನ ಮತ್ತು 21ನೇ ದಿನ ಮತ್ತೆ ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

    ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವೇತನ ಪಾವತಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. 10 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್ ನಮ್ಮ ಬಳಿ ಇದೆ. ಈ ವಸ್ತುಗಳ ಗುಣಮಟ್ಟದ ಬಗೆಗಿನ ಆರೋಪ ಸುಳ್ಳು ಎಂದು ಸುಧಾಕರ್​​ ಸ್ಪಷ್ಟಪಡಿಸಿದರು.

    ಬ್ಲ್ಯಾಕ್​​ ಫಂಗಸ್​ ಔಷಧಿ : ಉತ್ಪಾದನೆ, ಆಮದು ಹೆಚ್ಚಳ ; ಹೊಸದಾಗಿ 5 ಕಂಪೆನಿಗೆ ಲೈಸೆನ್ಸ್​

    ‘ಅಮ್ಮ ಬಿಟ್ಟು ಹೋದರು… ಅವರ ನೆನಪುಗಳನ್ನು ಉಳಿಸಿಕೊಡಿ’; ಬಾಲಕಿಯ ಈ ಮನವಿ ಕರುಳುಹಿಂಡುವಂಥದ್ದು !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts