More

    ರಾಜ್ಯದಲ್ಲಿ ಇಂದಿನ ಹೊಸ ಕರೊನಾ ಪ್ರಕರಣಗಳು, ಡಿಸ್​ಚಾರ್ಜ್​ ಆದವರ ಸಂಖ್ಯೆ 4000ಕ್ಕೂ ಅಧಿಕ

    ಬೆಂಗಳೂರು: ರಾಜ್ಯದಲ್ಲಿ 24 ಗಂಟೆಯಲ್ಲಿ ಪತ್ತೆಯಾದ ಕರೊನಾ ಸೋಂಕಿತರ ಸಂಖ್ಯೆ ಹಾಗೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದವರ ಸಂಖ್ಯೆ ಎರಡೂ 4000ದ ಗಡಿ ದಾಟಿದೆ.

    ಒಂದೇ ದಿನದಲ್ಲಿ ಒಟ್ಟು 4,752 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿದ್ದರೆ, 4,776 ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಹಾಗೇ 98 ಮಂದಿ ಮೃತಪಟ್ಟಿದ್ದಾರೆ.

    ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿದ್ದು, ಡಿಸ್​ಚಾರ್ಜ್​ ಆದವರ ಸಂಖ್ಯೆ 62,500 ಆಗಿದೆ. ಹಾಗೇ ಮೃತರ ಸಂಖ್ಯೆ 2594ಕ್ಕೆ ಏರಿದೆ. ರಾಜ್ಯದಲ್ಲಿ ಸಕ್ರಿಯ ಕರೊನಾ ಪ್ರಕರಣಗಳು 74,469, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 629 ಮಂದಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು? ಇಲ್ಲಿದೆ ನೋಡಿ ಪಟ್ಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts