24ಗಂಟೆಯಲ್ಲಿ 7 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖ; 113 ಸಾವು

Covid -19
Published on

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7883 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 7034 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಡಿಸ್​​ಚಾರ್ಜ್​ ಆಗಿದ್ದಾರೆ. 113 ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 1,96, 494ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 1,12,633ಮಂದಿ ಡಿಸ್​ಚಾರ್ಜ್​ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 80,343. ಇದುವರೆಗೆ ಸೋಂಕಿನಿಂದ ಮೃತಪಟ್ಟವರು ಒಟ್ಟು 3510 ಜನರು. ಹಾಗೇ ರಾಜ್ಯದಲ್ಲಿ 701 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಂದಿನಂತೆ ಬೆಂಗಳೂರಿನಲ್ಲಿಯೇ ಅತಿಹೆಚ್ಚು ಕರೊನಾ ಸೋಂಕಿತರು ಕಳೆದ 24 ಗಂಟೆಯಲ್ಲಿ ಪತ್ತೆಯಾಗಿದ್ದಾರೆ. ಒಟ್ಟು 2802 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net