More

    ಗಾನಕೋಗಿಲೆ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಲತಾ ಮಂಗೇಶ್ಕರ್ ಅಂತ್ಯಸಂಸ್ಕಾರ

    ಮುಂಬೈ: ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ, ಭಾರತ ರತ್ನ ಪುರಸ್ಕೃತ ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವು ಇದೀಗ ಪಂಚಭೂತಗಳಲ್ಲಿ ಲೀನವಾಗಿದೆ. ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಸರ್ಕಾರದ ಸಕಲ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನಡೆಸಲಾಯಿತು.

    ಪ್ರಧಾನಿ ನರೇಂದ್ರ ಮೋದಿ ಶಿವಾಜಿ ಪಾರ್ಕ್​ಗೆ ಭೇಟಿ ನೀಡಿ, ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನವನ್ನು ಸಲ್ಲಿಸಿದರು. ಅವರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬಸ್ಥರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದರು.

    ಇದನ್ನೂ ಓದಿ: ಡಾ.ರಾಜಕುಮಾರ್ ಅವರ ಕಂಚಿನ ಪುತ್ಥಳಿ ಕಳವು; ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    ಇನ್ನು ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನವನ್ನು ಅಮಿತಾಭ್ ಬಚ್ಚನ್, ಶಾರುಖ್​ ಖಾನ್​, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪಡೆದರು.

    ಗಾನಕೋಗಿಲೆ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಲತಾ ಮಂಗೇಶ್ಕರ್ ಅಂತ್ಯಸಂಸ್ಕಾರ
    ಪ್ರದಾನಿ ಮೋದಿಯಿಂದ ಅಂತಿಮ ನಮನ

    ಅಲ್ಲದೆ ಈಶ ಫೌಂಡೇಷನ್​ನ ಸದ್ಗುರು, ಶ್ರೀಶ್ರೀ ರವಿಶಂಕರ್ ಗುರೂಜಿ ಸೇರಿ ಸಿನಿಮಾ, ರಾಜಕೀಯ, ಕ್ರೀಡೆ, ಉದ್ಯಮ ಸೇರಿ ಹಲವಾರು ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ಕೂಡ ಲತಾ ಮಂಗೇಶ್ಕರ್​ ಅವರ ಅಗಲಿಕೆಗೆ ದುಃಖ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.

    ಲತಾ ಮಂಗೇಶ್ಕರ್​ ಜತೆ ವಾಜಪೇಯಿಯನ್ನೂ ನೆನಪಿಸಿಕೊಳ್ಳುತ್ತಿರುವ ಅಭಿಮಾನಿಗಳು; ಕಾರಣಗಳಿವು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts