ಯುವ ಸಮುದಾಯ ಸನ್ಮಾರ್ಗದಲ್ಲಿ ನಡೆದಾಗ ಉತ್ತಮ ಭವಿಷ್ಯ : ಮುಖ್ಯಶಿಕ್ಷಕ ಬಾಲಕೃಷ್ಣ ಕೆ. ಪ್ರತಿಪಾದನೆ

New Project (9)
Published on

ವಿಜಯವಾಣಿ ಸುದ್ದಿಜಾಲ ಕಡಬ

ಸಮಾಜದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಪ್ರಮುಖ. ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಸನ್ಮಾರ್ಗದಲ್ಲಿ ಮುನ್ನಡೆದು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಾಣಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಬಾಲಕೃಷ್ಣ ಕೆ. ಹೇಳಿದರು.

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾದ 13ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಅಧ್ಯಕ್ಷ ರಾಜೇಶ್ ಮೀಜೆ ಅಧ್ಯಕ್ಷತೆ ವಹಿಸಿದ್ದರು. ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಅರ್ಚಕ ಪ್ರಶಾಂತ್ ಭಟ್ ಪರ್ಲತ್ತಾಯ, ಕಾಣಿಯೂರು ಶ್ರೀ ವಿಷ್ಣುಪ್ರಿಯಾ ಭಜನಾ ಮಂಡಳಿ ಅಧ್ಯಕ್ಷೆ ಪೂರ್ಣಿಮಾ ಸಿ.ಕಲ್ಪಡ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಸ್ಥಾಪಕಾಧ್ಯಕ್ಷ ರಾಧಾಕೃಷ್ಣ ಪೆರ್ಲೋಡಿ, ಪುಷ್ಪಾ ರಾಜೇಶ್ ಪುತ್ತೂರು ಉಪಸ್ಥಿತರಿದ್ದರು.

ನಿವೃತ್ತರನ್ನು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಆಶ್ರಯದಲ್ಲಿ ಆ.27, 28ರಂದು ನಡೆಯಲಿರುವ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಅನಾವರಣಗೊಳಿಸಲಾಯಿತು. ಯುವಕ ಮಂಡಲ ಗೌರವಾಧ್ಯಕ್ಷ ಸುರೇಶ್ ಓಡಬಾಯಿ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ದೀಕ್ಷಿತ್ ಕಂಪ ಬಹುಮಾನ ವಿಜೇತರ ವಿವರ ವಾಚಿಸಿದರು. ವಿನಯ್ ಏಳುವೆ ಸ್ವಾಗತಿಸಿದರು. ಸುರೇಶ್ ಓಡಬಾಯಿ ವಂದಿಸಿದರು. ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಿಗೆ ಮುದ್ದು ಕೃಷ್ಣ ವೇಷ ಸ್ಪರ್ಧೆ, ವಿವಿಧ ಆಟೋಟ ಸ್ಪರ್ಧೆಗಳು ನಡೆದವು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net