More

    ಮಾಸ್ಕೋದಿಂದ ಗೋವಾಗೆ ಆಗಮಿಸುತ್ತಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ: ಗುಜರಾತ್​ನಲ್ಲಿ ತುರ್ತು ಭೂಸ್ಪರ್ಶ

    ಅಹಮದಾಬಾದ್​: ಬಾಂಬ್​ ಬೆದರಿಕೆ ಕರೆ ಹಿನ್ನೆಲೆಯಲ್ಲಿ ರಷ್ಯಾ ರಾಜಧಾನಿ ಮಾಸ್ಕೋದಿಂದ ಗೋವಾಗೆ ಆಗಮಿಸುತ್ತಿದ್ದ 244 ಪ್ರಯಾಣಿಕರಿದ್ದ ಚಾರ್ಟೆಡ್​ ವಿಮಾನವು ಗುಜರಾತ್​ನ ಜಾಮ್​ನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.

    ಗೋವಾದ ಏರ್​ ಟ್ರಾಫಿಕ್​ ಕಂಟ್ರೋಲರ್​ ಬಾಂಬ್​​ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಜಾಮ್​ನಗರದಲ್ಲೇ ಲ್ಯಾಂಡಿಂಗ್​ ಮಾಡಲಾಗಿದೆ. ವಿಮಾನದಲ್ಲಿ 8 ಸಿಬ್ಬಂದಿ ಸೇರಿದಂತೆ ಒಟ್ಟು 244 ಪ್ರಯಾಣಿಕರಿದ್ದರು. ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿ, ಪೊಲೀಸ್​ ಮತ್ತು ಬಾಂಬ್​ ಪತ್ತೆ ಮತ್ತು ನಿಷ್ಕ್ರಿಯ ದಳದೊಂದಿಗೆ ಸ್ಥಳೀಯ ಅಧಿಕಾರಿಗಳು ವಿಮಾನವನ್ನು ಪರಿಶೀಲನೆ ನಡೆಸಿರುವುದಾಗಿ ರಾಜ್​ಕೋಟ್​-ಜಾಮ್​ನಗರ ಐಜಿಪಿ ಅಶೋಕ್​ ಕುಮಾರ್​ ಯಾದವ್​ ಮಾಹಿತಿ ನೀಡಿದರು.

    ವಿಮಾನವನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ ಎಂದು ಜಾಮ್‌ನಗರ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋದಿಂದ ಗೋವಾಗೆ ಆಗಮಿಸುತ್ತಿದ್ದ ಅಝುರ್​ ಏರ್​ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿರುವುದಾಗಿ ಭಾರತೀಯ ಅಧಿಕಾರಿಗಳು ರಾಯಭಾರ ಕಚೇರಿಗೆ ಎಚ್ಚರಿಕೆ ಸಂದೇಶ ರವಾನಿಸಿದರು. ಕೂಡಲೇ ವಿಮಾನವನ್ನು ಗುಜರಾತ್​ನ ಜಾಮ್​ನಗರದಲ್ಲಿರುವ ಭಾರತೀಯ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್​ ಮಾಡಲಾಗಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ವಿಮಾನವನ್ನು ಪರಿಶೀಲಿಸಿದ್ದಾರೆ ಎಂದು ರಷ್ಯಾ ರಾಯಭಾರ ಕಚೇರಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

    ನಿನ್ನೆ (ಜ.09) ರಾತ್ರಿ 9.49ರ ಸುಮಾರಿಗೆ ಜಾಮ್​ನಗರ ವಾಯುನೆಯಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ ಎಂದು ಜಾಮ್​ನಗರ ವಿಮಾನ ನಿಲ್ದಾಣದ ನಿರ್ದೇಶಕ ತಿಳಿಸಿದ್ದಾರೆ. ಮಾಸ್ಕೋದಿಂದ ಟೇಕ್ ಆಫ್ ಆಗಿದ್ದ ವಿಮಾನವು ಗೋವಾದ ಡಬೋಲಿಮ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು ಎಂದು ಗೋವಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋವಾ ಪೊಲೀಸರು ಮುನ್ನೆಚ್ಚರಿಕೆಯಾಗಿ ದಾಬೋಲಿಮ್ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಹೇಳಿದರು. (ಏಜೆನ್ಸೀಸ್​)

    ಪರಭಾಷೆಗೆ ಕಾಂತಾರ ಲೀಲಾ; ‘ಕಾಳಿ’ಗಾಗಿ ಸಿದ್ಧತೆ ನಡೆಸುತ್ತಿರುವ ಸಪ್ತಮಿ ಗೌಡ

    ರಜಿನಿಕಾಂತ್ ಜತೆ ಮೋಹನ್​ಲಾಲ್; 169ನೇ ಚಿತ್ರ ಜೈಲರ್

    ಪಾಕಿಸ್ತಾನಿ ನಟಿಯ ಜತೆ ಶಾರುಖ್​ ಪುತ್ರನ ಪಾರ್ಟಿ: ವೈರಲ್​ ಆಯ್ತು ಸಾದಿಯಾ-ಆರ್ಯನ್​ ಖಾನ್​ ಫೋಟೋ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts