ಶಿವಮೊಗ್ಗ: ಚಿಕೂನ್‌ಗುನ್ಯಾ, ಮಲೇರಿಯಾದಂತಹ ಮಾರಣಾಂತಿಕ ರೋಗಗಳನ್ನು ಹರಡುವ ಸೊಳ್ಳೆಗಳನ್ನು ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಬಾಪೂಜಿ ಆಯುರ್ವೇದಿಕ್ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಡೆಂೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಮುಂಗಾರು ಆರಂಭವಾಗಲಿದ್ದು ಮನೆ ಸುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆಯಿಂದ ಡೆಂೆ ಸೇರಿ ಸೊಳ್ಳೆಯಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ರೋಗಗಳ ಬಗ್ಗೆ ಮುನ್ನೆಚ್ಚರಿಕೆವಹಿಸಿ ನಿಯಂತ್ರಣಕ್ಕೆ ಬದ್ಧರಾಗಬೇಕು. ಜತೆಗೆ ಪ್ಲಾಸ್ಟಿಕ್ ಬಳಕೆಗೂ ಕಡಿವಾಣ ಹಾಕಬೇಕಾದ ಅವಶ್ಯಕತೆಯಿದೆ ಎಂದು ತಿಳಿಸಿದರು.
ಡಿಎಚ್‌ಒ ಡಾ.ನಟರಾಜ್ ಮಾತನಾಡಿ, ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಸಿಮೆಂಟ್ ತೊಟ್ಟಿಗಳು, ಟೈರ್‌ಗಳು, ಬ್ಯಾರೆಲ್‌ಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂೆ ಮತ್ತು ಚಿಕೂನ್‌ಗುನ್ಯಾ ಹರಡುವ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಯಾಗುತ್ತವೆ ಎಂದು ಎಚ್ಚರಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ ಮಾತನಾಡಿ, ಡೆಂೆ ಸೋಲಿಸಲು ಹೆಜ್ಜೆಗಳು: ಪರಿಶೀಲಿಸಿ, ಸ್ವಚ್ಚಗೊಳಿಸಿ, ಮುಚ್ಚಿಡಿ ಎಂಬುದು ಈ ವರ್ಷದ ಘೋಷವಾಕ್ಯ. ಪ್ರತಿವರ್ಷ ಮೇ 16ರಂದು ಡೆಂೆ ದಿನಾಚರಣೆ ನಡೆಸಲಾಗುತ್ತದೆ. ಸೊಳ್ಳೆಗಳಿಂದ ಉಂಟಾಗುವ ರೋಗಗಳನ್ನು ಎದುರಿಸಲು ಸಿದ್ಧವಾಗಬೇಕೆಂಬ ಉದ್ದೇಶದಿಂದ ಈ ದಿನ ಪ್ರಚಲಿತದಲ್ಲಿದೆ ಎಂದು ತಿಳಿಸಿದರು.
ಸೊಳ್ಳೆ ಉತ್ಪತ್ತಿ ತಾಣಗಳು, ಪರಿಕರಗಳಾದ ಡ್ರಂ, ಸಿಮೆಂಟ್ ತೊಟ್ಟಿಗಳನ್ನು ಸ್ವಚ್ಛಗೊಳಿಸಬೇಕು. ಅಡಕೆ ತೋಟದಲ್ಲಿನ ಹಾಳೆಗಳಲ್ಲಿ ಲಾರ್ವಾ ಹೆಚ್ಚಿರುತ್ತವೆ. ತೋಟದ ಕೆಲಸ ಮಾಡುವ ಕಾರ್ಮಿಕರಲ್ಲೂ ಡೆಂೆ ಪ್ರಕರಣಗಳು ಕಂಡು ಬರುತ್ತಿವೆ ಎಂದರು.
ಡಿಎಸ್‌ಒ ಡಾ. ನಾಗರಾಜ ನಾಯ್ಕ, ಟಿಎಚ್‌ಒ ಡಾ. ಚಂದ್ರಶೇಖರ್, ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಎಂವಿಟಿ ಆರಾಧ್ಯ, ಬಾಪೂಜಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯೆ ಡಾ. ಕವಿತಾ ಇತರರಿದ್ದರು.