More

    ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ

    ಜಗಳೂರು: ಪಟ್ಟಣದಲ್ಲಿ ಡೆಂೆ, ಚಿಕೂನ್‌ಗುನ್ಯಾ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ಮಂಗಳವಾರ ಪ್ರಮುಖ ಸ್ಥಳಗಳಲ್ಲಿ ಫಾಗಿಂಗ್ ಮಾಡಿದರು.

    ಪಂ ಮುಖ್ಯಾಧಿಕಾರಿ ಸಿ. ಲೋಕ್ಯಾನಾಯ್ಕ ಮಾತನಾಡಿ, ಪಟ್ಟಣದಲ್ಲಿ 2 ಡೆಂೆ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಮನೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಕಾಳಜಿ ವಹಿಸಬೇಕು. ಹಸಿ ಕಸ ಮತ್ತು ಒಣ ಕಸ ಹಾಗೂ ಅಪಾಯಕಾರಿ ತ್ಯಾಜ್ಯವನ್ನು ವಿಂಗಡಿಸಿ ಪಟ್ಟಣ ಪಂಚಾಯಿತಿ ವಾಹನಕ್ಕೆ ನೀಡುವಂತೆ ತಿಳಿಸಲಾಯಿತು.

    ಜಿಲ್ಲಾ ಆರೋಗ್ಯ ಮೇಲ್ವಿಚಾರಕ ವಿಜಯಕುಮಾರ್ ಎಚ್.ಗಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಸಿದ್ದಪ್ಪ, ವಕೀಲ ಹನುಮಂತಪ್ಪ, ತಾಲೂಕು ಮೇಲ್ವಿಚಾರಕ ಎಂ.ಆಂಜನೇಯ, ಆರೋಗ್ಯ ನಿರೀಕ್ಷಕರಾದ ಕಿಫಾಯತ್ ಅಹಮ್ಮದ್, ಅಮ್ರಿನ್ ಖಾನಂ, ರಘುವೀರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts