More

    ಸೊಳ್ಳೆಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಲು ಡಿಎಚ್‌ಒ ಸುರೇಂದ್ರಬಾಬು ಸಲಹೆ

    ರಾಯಚೂರು: ಡೆಂಗ್ಯೂ ನಿಯಂತ್ರಣ ಸಾರ್ವಜನಿಕರ ಕೈಯಲ್ಲಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಹೇಳಿದರು.

    ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಒಂದು ಪ್ರಭೇದದ ಸೊಳ್ಳೆ ಕಚ್ಚುವುದರಿಂದ ಡೆಂೆ ಬರುತ್ತಿದ್ದು, ಸೊಳ್ಳೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಎಂದರು.

    ಇದನ್ನೂ ಓದಿ: ಸೊಳ್ಳೆಗಳ ನಿಯಂತ್ರಿಣಕ್ಕೆ ಆರೋಗ್ಯ ಇಲಾಖೆಯಿಂದ ವಿಶೇಷ ಕಾರ್ಯಕ್ರಮ

    ಡಾ.ಕೆ.ಗಣೇಶ ಮಾತನಾಡಿ, ಸೊಳ್ಳೆ ನಿಯಂತ್ರಣಕ್ಕೆ ಮನೆಯಲ್ಲಿನ ತೊಟ್ಟಿ, ಬ್ಯಾರಲ್, ಏರ್ ಕೂಲರ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿದ ನಂತರ ಮತ್ತೆ ಭರ್ತಿ ಮಾಡಬೇಕು. ಬಯಲಿನಲ್ಲಿರುವ ತ್ಯಾಜ್ಯಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.

    ಮಲಗುವಾಗ ಸೊಳ್ಳೆ ನಿರೋಧಕ ಪರದೆ ಬಳಸಬೇಕು. ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಮೂಲಕ ರೋಗ ಸಾಂಕ್ರಾಮಿಕವಾಗಿ ಹರಡದಂತೆ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts