ಶಾಲೆಗಳಿಗೆ ದಾನಿಗಳಿಂದಲೇ ಹೆಚ್ಚಿನ ಭೂದಾನ

blank

ಶಿರಾಳಕೊಪ್ಪ: ರಾಜ್ಯದಲ್ಲಿ ಶಾಲೆಗಳಿಗೆ ಸರ್ಕಾರ ನೀಡಿದ ಜಾಗಕ್ಕಿಂತ ಭೂದಾನ ನೀಡಿದ ಜಮೀನು ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಾವಗಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು, ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಹಾಲು, ರಾಗಿಮಾಲ್ಟ್ ಸೇರಿದಂತೆ ಪುಸ್ತಕ, ಸಮವಸ ನೀಡಲು 45 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದರು.
ಶತಮಾನೋತ್ಸವದ ಪ್ರಯುಕ್ತ ಶಾಲಾಭಿವೃದ್ಧಿ ಸಮಿತಿ ಮನವಿ ಮೇರೆಗೆ 4 ಕೊಠಡಿ ಮಂಜೂರು ಮಾಡಲಾಗುವುದು. ಮುಂದಿನ ವರ್ಷ ಸ್ಮಾರ್ಟ್‌ಕ್ಲಾಸ್ ನೀಡಲಾಗುವುದು. ಶಾಲೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಬಡವರ ಮನೆಗೆ ಬೆಳಕಾಗಲು ಗೃಹಜ್ಯೋತಿ, ಗೃಹಲಕ್ಷ್ಮಿ, ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಗೌಡ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕತೆ ಕೊರತೆ ನೀಗಿಸಲು ಸರ್ಕಾರ ಮೊಟ್ಟೆ ವಿತರಿಸಲು ಕ್ರಮ ಕೈಗೊಂಡಿದೆ ಎಂದರು.
ಶಾಲೆಗೆ 2 ಎಕರೆ ಜಮೀನು ದಾನ ನೀಡಿದ ಬಸವರಾಜಯ್ಯ ಅವರನ್ನು ಗೌರವಿಸಲಾಯಿತು. ಪುರಸಭೆ ಅಧ್ಯಕ್ಷೆ ಮಮತಾ ನಿಂಗಪ್ಪ, ಉಪಾಧ್ಯಕ್ಷ ಮುದಾಸೀರ್, ಸದಸ್ಯರಾದ ಎಂ.ಆರ್.ರಾಘವೇಂದ್ರ, ಪಿ.ಜಾರ್, ಎಸ್‌ಡಿಎಂಸಿ ಅಧ್ಯಕ್ಷ ಬಿ.ಸಿ.ಈಶಪ್ಪ, ಗ್ರಾಪಂ ಸದಸ್ಯ ಪುಟ್ಟಪ್ಪ, ಶಶಿಕಲಾ, ಬಿಇಒ ಲೋಕೇಶ್ ಇತರರಿದ್ದರು.

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…