More

    ಕ್ಷಯರೋಗಕ್ಕೆ ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ಬಲಿ : ಕೇಂದ್ರ ಭಗವಂತ ಖೂಬಾ ಕಳವಳ

    ಮೈಸೂರು: ಪೌಷ್ಟಿಕಾಂಶದಿಂದ ಕೂಡಿದ ಆಹಾರದ ಕೊರತೆ ಹಾಗೂ ಕಾಯಿಲೆಯನ್ನು ನಿರ್ಲಕ್ಷಿಸುವ ಮನೋಭಾವದಿಂದ ದೇಶದಲ್ಲಿ ಕ್ಷಯರೋಗಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಡ ವರ್ಗದವರು ಬಲಿಯಾಗುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಕಳವಳ ವ್ಯಕ್ತಪಡಿಸಿದರು.

    ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನ ಅಕ್ಯಾಡೆಮಿ, ಜೆಎಸ್‌ಎಸ್ ವೈದ್ಯಕೀಯ ಕಾಲೇಜು ವತಿಯಿಂದ ಕಾಲೇಜಿನ ಶ್ರೀ ರಾಜೇಂದ್ರ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಕ್ಷಯರೋಗ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕ್ಷಯ ರೋಗಕ್ಕೆ ಸರ್ಕಾರ ಉಚಿತವಾಗಿ ಔಷಧ ನೀಡುತ್ತಿದೆ. ಕೇವಲ ಔಷಧ ನೀಡುವುದರಿಂದ ಮಾತ್ರ ಕ್ಷಯರೋಗ ನಿರ್ಮೂಲನೆ ಸಾಧ್ಯವಿಲ್ಲ ಎಂಬ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ‘ಕ್ಷಯ ರೋಗಿಗಳ ದತ್ತು ಯೋಜನೆ’ ಘೋಷಿಸಿದರು. ಈ ದತ್ತು ಯೋಜನೆಯಡಿ 6 ತಿಂಗಳ ಕಾಲ ರೋಗಿಗಳಿಗೆ ಉಚಿತವಾಗಿ ಪೌಷ್ಟಿಕಾಂಶದಿಂದ ಕೂಡಿದ ಆಹಾರ ನೀಡಲು ಅವಕಾಶ ನೀಡಲಾಗಿದ್ದು, ಈ ಯೋಜನೆಗೆ ದೇಶಾದ್ಯಂತ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.

    ಪುದುಚೇರಿ ಸರ್ಕಾರದ ಗೃಹ ಸಚಿವ ಎ. ನಮಶಿವಾಯಂ ಮಾತನಾಡಿ, ಕ್ಷಯವನ್ನು ಕೇವಲ ಔಷಧದಿಂದ ಮಾತ್ರ ಮುಕ್ತ ಮಾಡಲು ಸಾಧ್ಯವಿಲ್ಲ. ಕ್ಷಯ ಸೇರಿದಂತೆ ಪ್ರತಿಯೊಂದು ಕಾಯಿಲೆಗಳಿಂದ ದೂರ ಇರಲು ನಾವು ಉತ್ತಮ ಆರೋಗ್ಯ ಅಭ್ಯಾಸಗಳನ್ನು ಬೆಳೆಸಿಕೊಳ್ಳ ಬೇಕು. ಈ ಹಿನ್ನೆಲೆಯಲ್ಲಿ ನಮ್ಮ ಆರೋಗ್ಯ ವೃದ್ಧಿಸಲು ಪ್ರಧಾನಿ ನರೇಂದ್ರ ಮೋದಿ ಯೋಗ ದಿನಾಚರಣೆ ಪ್ರಾರಂಭಿಸಿದರು. ಪ್ರತಿಯೊ ಬ್ಬರು ಯೋಗ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ರೋಗದಿಂದ ಮುಕ್ತರಾಗಬೇಕು ಎಂದು ಕರೆ ನೀಡಿದರು.

    ಶ್ರೀ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಭೂಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜಿನ ಡೀನ್ ಡಾ.ಸುನಿಲ್ ಭಾರ್ಗವ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನ ಅಕ್ಯಾಡೆಮಿ ಸಮಕುಲಾಧಿಪತಿ ಡಾ.ಬಿ. ಸುರೇಶ್, ಕುಲಪತಿ ಡಾ. ಸುರೀಂದರ್ ಸಿಂಗ್, ಕುಲಸಚಿವ ಡಾ.ಬಿ. ಮಂಜುನಾಥ, ಸಮ್ಮೇಳನದ ಸಂಘಟನಾ ಅಧ್ಯಕ್ಷರಾದ ಡಾ.ಡಿ. ಸುನಿಲ್ ಕುಮಾರ್, ಡಾ.ಬಿ.ಎಸ್. ಜಯರಾಜ್, ಸಂಘಟನಾ ಕಾರ್ಯದರ್ಶಿ ಡಾ.ನಾರಾಯಣ ಶಬಾದಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts