More

    ಶ್ರೀಲಂಕಾದ ಸ್ಟಾರ್​ ಬ್ಯಾಟರ್​ನ ದಾಖಲೆ ಮುರಿದ ಜಡೇಜಾ

    ಹೈದರಾಬಾದ್​: ಇಲ್ಲಿನ ಇಲ್ಲಿನ ರಾಜೀವ್​ ಗಾಂಧಿ ಅಂತರಾಷ್ಟ್ರೀಯ ಕ್ರೀಂಡಾಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಮೊದಲ ಟೆಸ್ಟ್​ ಪಂದ್ಯದಲ್ಲಿ ಎದುರಾಳಿಗಳ ವಿರುದ್ಧ ಅತಿಥೇಯರು ಮೇಲುಗೈ ಸಾಧಿಸಿದ್ದು, ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 175 ರನ್​ಗಳ ಬೃಹತ್​ ಮುನ್ನಡೆಯನ್ನು ಸಾಧಿಸಿದೆ.

    ಇನ್ನೂ ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ತಮ್ಮ ಆಲ್ರೌಂಡ್​ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದು, ಶ್ರೀಲಂಕಾದ ಕ್ರಿಕೆಟ್​ ದಿಗ್ಗಜ ಸನತ್​ ಜಯಸೂರ್ಯ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    155 ಎಸೆತಗಳನ್ನು ಎದುರಿಸಿ 81 ರನ್​ ಗಳಿಸಿರುವ ರವೀಂದ್ರ ಜಡೇಜಾ 7 ಬೌಂಡರಿ ಹಾಗೂ 2 ಸಿಕ್ಸರ್​ ಸಿಡಿಸಿದ್ದಾರೆ. ಪಂದ್ಯದಲ್ಲಿ ಎರಡು ಭರ್ಜರಿ ಸಿಕ್ಸರ್ ಸಿಡಿಸಿರುವ ಜಡೇಜಾ ಟೆಸ್ಟ್ ಕ್ರಿಕೆಟ್​ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸನತ್ ಜಯಸೂರ್ಯ ಅವರ ದಾಖಲೆಯನ್ನು ಮುರಿದಿದ್ದಾರೆ.

    ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇತಿಹಾಸ ರಚಿಸಿದ ರವೀಂದ್ರ ಜಡೇಜಾ

    ಒಟ್ಟು 69 ಟೆಸ್ಟ್​ ಪಂದ್ಯಗಳನ್ನು ಆಡಿರುವ ರವೀಂದ್ರ ಜಡೇಜಾ ಈವರೆಗೆ 60 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. 110 ಟೆಸ್ಟ್​ ಪಂದ್ಯಗಳನ್ನು ಆಡಿರುವ ಸನತ್​ ಜಯಸೂರ್ಯ 59 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಸನತ್​ ಜಯಸೂರ್ಯ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ.

    ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ ಸಿಡಿಸಿದ ಬ್ಯಾಟ್ಸ್​ಮನ್​ಗಳ ಪೈಕಿ ಇಂಗ್ಲೆಂಡ್​ ಆಟಗಾರ ಬೆನ್​ ಸ್ಟೋಕ್ಸ್​ (127) ಮೊದಲ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್​ (91) ಅತಿ ಹೆಚ್ಚು ಸಿಕ್ಸರ್​ ಸಿಡಿಸಿದ ಬ್ಯಾಟ್ಸ್​ಮನ್​ಗಳ ಪೂಕಿ ಎರಡನೇ ಸ್ಥಾನದಲ್ಲಿದ್ದಾರೆ. ಟೆಸ್ಟ್​ ಕ್ರಿಕೆಟ್​ನಲ್ಲಿ ಇನ್ನೂ 10 ಸಿಕ್ಸರ್​ ಸಿಡಿಸಿದರೆ ಭಾರತ ಕ್ರಿಕೆಟ್​ ದಿಗ್ಗಜರಾದ ಸಚಿನ್​ ತೆಂಡುಲ್ಕರ್ ಹಾಗೂ ಕಪಿಲ್​ ದೇವ್​ ಅವರ ದಾಖಲೆಯನ್ನು ರವೀಂದ್ರ ಜಡೇಜಾ ಮುರಿಯಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts