ಮಹಿಳಾ ದಿನಾಚರಣೆಯಂದೇ ನಡೆಯಿತು ದುರಂತ!; ಹೆಣ್ಣು ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

D F
Published on

ಚಿಕ್ಕಬಳ್ಳಾಪುರ: ಜಗತ್ತಿನಾದ್ಯಂತ ಮಹಿಳೆಯರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂತೋಷ-ಸಂಭ್ರಮದಲ್ಲಿದ್ದರೆ ಇಲ್ಲೊಬ್ಬ ತಾಯಿ ಹಾಗೂ ಮಗಳು ದುರಂತ ಅಂತ್ಯ ಕಂಡಿದ್ದಾರೆ. ಅಷ್ಟಕ್ಕೂ ಕ್ಷುಲ್ಲಕ ಕಾರಣವೊಂದಕ್ಕೆ ಕೊಲೆ ಹಾಗೂ ಆತ್ಮಹತ್ಯೆ ಎರಡೂ ನಡೆದುಹೋಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಊದುತಿ ಗ್ರಾಮದ ನಿವಾಸಿ ರಾಧಾ (28) ಎಂಬಾಕೆ ತನ್ನ ಎರಡು ವರ್ಷದ ಮಗಳನ್ನು ಕೊಂದುಹಾಕಿ ಕೊನೆಗೆ ತಾನೂ ಆತ್ಯಹತ್ಯೆ ಮಾಡಿಕೊಂಡಿದ್ದಾಳೆ. ಗಂಡ ಹಾಗೂ ಅತ್ತೆ ಬೈದರು ಎಂಬ ಕಾರಣಕ್ಕೆ ಈ ತಾಯಿ ಇಂಥದ್ದೊಂದು ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ.

ಗೌರಿಬಿದನೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅತ್ತೆ ಅಶ್ವತ್ಥಮ್ಮ ಹಾಗೂ ಗಂಡ ಮಂಜುನಾಥ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net