16 C
Bangalore
Saturday, December 7, 2019

ಆರೋಗ್ಯ ಕಾಳಜಿ ವಹಿಸಿದರೆ ತಾಯಿ, ಶಿಶು ಮರಣ ತಡೆ ಸಾಧ್ಯ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...
 ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೆ ಮಂಜುಳಾ ಅಭಿಪ್ರಾಯ

ಶನಿವಾರಸಂತೆ: ಗರ್ಭಿಣಿ, ಬಾಣಂತಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತೆ ಕಾಪಾಡಿಕೊಂಡರೆ ತಾಯಿ ಹಾಗೂ ಶಿಶು ಮರಣ ತಡೆಗಟ್ಟಲು ಸಾಧ್ಯ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೆ ಮಂಜುಳಾ ಅಭಿಪ್ರಾಯಪಟ್ಟರು.

ಮಾದ್ರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ್ದ ತಾಯಿ ಮತ್ತು ಶಿಶು ಮರಣದ ಕುರಿತು ಅಂಗನವಾಡಿ ಮಕ್ಕಳ ಪಾಲಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗರ್ಭಿಣಿಯರು ಆರೋಗ್ಯದ ಬಗ್ಗೆ ಕಾಳಜಿವಹಿಸಿ ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು, ಪೌಷ್ಠಿಕ ಆಹಾರ ಸೇವಿಸಿದರೆ ಆರೋಗ್ಯ ಉತ್ತಮಗೊಳ್ಳುತ್ತದೆ. ಇದರಿಂದ ಮಗು ಉತ್ತಮವಾಗಿ ಬೆಳೆಯುತ್ತದೆ, ಸಧೃಡ ಮಗುವಿನ ಬೆಳವಣಿಗೆಗೆ ಗರ್ಭಿಣಿಯರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿ ಕೊಂಡರೆ ತಾಯಿ, ಮಗು ಆರೋಗ್ಯವಾಗಿರುತ್ತಾರೆ. ಬಾಣಂತಿಯರು ತಮ್ಮ ಹಾಗೂ ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ತಾಯಿ ಮತ್ತು ಶಿಶು ಮರಣ ಸಂಭವಿಸುವುದಿಲ್ಲ ಎಂದರು.

ಮಾದ್ರೆ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪುಟ್ಟರಾಜು ಮಾತನಾಡಿ, ತಾಯಿ ತನ್ನ ಮಗುವನ್ನು ಆರೋಗ್ಯವಾಗಿ ಬೆಳೆಸಿದರೆ ಮುಂದೆ ಮಗು ಆರೋಗ್ಯವಂತ ಮಕ್ಕಳಾಗಿ ಬೆಳೆಯುತ್ತಾರೆ, ತಾಯಿಂದಿರು ಮಾನಸಿಕ ಚಿಂತನೆಯಿಂದ ದೂರವಿದ್ದು ತನ್ನ ಮಗುವನ್ನು ಅಮೂಲ್ಯವಾದ ಆಸ್ತಿ ಎಂದು ಭಾವಿಸಿ ಬೆಳೆಸಿದರೆ ಭವಿಷ್ಯದಲ್ಲಿ ಮಕ್ಕಳು ಸಮಾಜದ ದೊಡ್ಡ ಸಂಪತ್ತಾಗುತ್ತಾರೆ ಎಂದರು.

ಆರೋಗ್ಯ ಸಹಾಯಕಿ ಸರಸ್ವತಿ ಮಾತನಾಡಿ, ಕೆಲವು ವರ್ಷಗಳ ಹಿಂದೆ ತಾಯಿ ಮತ್ತು ಶಿಶು ಮರಣ ಹೆಚ್ಚಾಗುತ್ತಿದ್ದವು, ಆದರೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರ ಮತ್ತು ಆರೋಗ್ಯ ಇಲಾಖೆ ತಾಯಿ, ಶಿಶು ಮರಣ ನಿಯಂತ್ರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಫಲಾನುಭವಿಗಳು ಸರ್ಕಾರದ ಸವಲತ್ತುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಆಶಾ ಕಾರ್ಯಕರ್ತೆ ಸೌಮ್ಯಾ, ಸ್ತ್ರಿ ಶಕ್ತಿ ಸಂಘದ ಸದಸ್ಯರು ಮತ್ತು ಶಾಲಾ ಶಿಕ್ಷಕರು,ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿದ್ದರು.

 

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...