ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ

Death symbolic photo
Published on

ತುಮಕೂರು: ಪತಿ ಹೃದಯಾಘಾತಕ್ಕೆ ಬಲಿಯಾದ ನೋವಿನಲ್ಲಿ ನೊಂದ ಪತ್ನಿ ತನ್ನ ಪುತ್ರನೊಂದಿಗೆ ಒಂದೇ ಉರುಳಿಗೆ ಕೊರಳೊಡ್ಡಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿ ಮಗ ಆತ್ಮಹತ್ಯೆ. ತಿಪಟೂರು ನಗರದ ಶಾರದಾ ನಗರದಲ್ಲಿ ಈ ಘಟನೆ ನಡೆದಿದೆ. ತಾಯಿ ಸೌರಭ (33) ಮಗ ಆರ್ಯ(7) ಸಾವಿಗೀಡಾದವರು. ಈಕೆಯ ಪತಿ ಎರಡು ತಿಂಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದರು. ಗಂಡನ ಸಾವಿನಿಂದ ಈಕೆ ಮನನೊಂದು ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಎರಡು ತಿಂಗಳ ಹಿಂದೆ ನೇಣು ಹಾಕಿಕೊಂಡಿರುವ ಶಂಕೆ ಮೂಡಿದೆ. ಸ್ಥಳಕ್ಕೆ ತಿಪಟೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ತಿಪಟೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net