ಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು, ಚಿಕ್ಕಬಳ್ಳಾಪುರದಲ್ಲಿ ಕರುಣಾಜನಕ ಘಟನೆ

CKB Mother and Daughter
Published on

ಚಿಕ್ಕಬಳ್ಳಾಪುರ: ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ನಡೆದಿದೆ. ಅದೃಷ್ಟವಶಾತ್​ ಓರ್ವ ಹೆಣ್ಣು ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ದುರಂತ ಸಾವಿಗೀಡಾಗಿದ್ದರೆ, 7 ವರ್ಷದ ಗಂಗೋತ್ರಿ ಬಾವಿಯಿಂದ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿಯಿರುವ‌ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳಿಗಾಗಿ ಆಗ್ನಿಶಾಮಕದಳ ಶೋಧ ಕಾರ್ಯ ನಡೆಸುತ್ತಿದೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net