More

    ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ; ಕಾರಣ ಇದೇನಾ?

    ಕೋಲಾರ: ಮಕ್ಕಳೊಂದಿಗೆ ಪಾಲಕರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳ ಸಾಲಿಗೆ ಇದೊಂದು ಹೊಸ ಸೇರ್ಪಡೆ. ದುರಂತವೆಂದರೆ ಇಲ್ಲಿ ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಒಬ್ಬರ ದುಡುಕಿನ ನಿರ್ಧಾರದಿಂದಾಗಿ ಇಬ್ಬರು ಜೀವ ಕಳೆದುಕೊಂಡಂತಾಗಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೀರ್ತಿ (23) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ತಾಯಿ. ಯೋಗಶ್ರೀ ತಾಯಿಯೊಂದಿಗೆ ಪ್ರಾಣ ಕಳೆದುಕೊಂಡ ಮಗಳು. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ.

    ಈ ಮಧ್ಯೆ ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಕೀರ್ತಿಯ ಪತಿ ಸುಧಾಕರ್ ಎಂಬವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತಂತೆ ಹೆಚ್ಚಿನ ವಿವರಗಳು ಖಚಿತವಾಗಿ ಇನ್ನಷ್ಟೇ ತಿಳಿದು ಬರಬೇಕಿದೆ.

    ಶಾಸಕ ಜಮೀರ್​ ಅಹಮದ್​ರಿಂದ ಎಂಜಲು ಸೇವನೆ; ತಿನ್ನಲು ಕಾರಣವಿದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts