ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವಲ್ಲಿ ತಾಯಿಯ ಪಾತ್ರ

Sub_Mother's role
Published on

ಸುಬ್ರಹ್ಮಣ್ಯ: ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವಲ್ಲಿ ತಾಯಿಯ ಪಾತ್ರ ಅನನ್ಯ. ಮನೆಯಲ್ಲಿ ಮಕ್ಕಳಿಗೆ ಭಜನೆಯಂತಹ ಉತ್ತಮ ವಿಚಾರಗಳತ್ತ ಗಮನ ಹರಿಸುವಂತೆ ಮಾಡುವ ಮಹತ್ವದ ಗುಣ ತಾಯಿ ಹೊಂದಿರುತ್ತಾರೆ ಎಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಹೇಳಿದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ತಾಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೂತ್ಕುಂಜ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ನಳಿನಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಪಂಜ ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಜಳಕದಹೊಳೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪಂಜ ವಲಯಾಧ್ಯಕ್ಷ ಎಲ್ಯಣ್ಣ ಗೌಡ ಕಟ್ಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪಂಜ ವಲಯ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ, ಪಂಜ ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ವಲಯಾಧ್ಯಕ್ಷ ಧರ್ಮಪಾಲ ಕಣ್ಕಲ್, ಪ್ರಮುಖರಾದ ನಾಗರತ್ನ ದಯಾನಂದ, ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ಸಂಯೋಜಕಿ ತ್ರಿವೇಣಿ, ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಉಪಸ್ಥಿತರಿದ್ದರು.

ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಸ್ವಾಗತಿಸಿದರು. ಮೇಲ್ವಿಚಾರಕಿ ಕಲಾವತಿ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಲಕ್ಷ್ಮೀ ವಂದಿಸಿದರು.

ಗೌರವಾರ್ಪಣೆ

ನಾಟಿ ವೈದ್ಯೆ ಬಾಲಕ್ಕ ಎಣ್ಣೆಮಜಲು, ಶೈಕ್ಷಣಿಕ ಸಾಧನೆಗೆ ಬಿಪಿನ್ ಏನೆಕಲ್ಲು, ವಿನುತಾ ಬಳ್ಪ ಅವರನ್ನು ಸನ್ಮಾನಿಸಲಾಯಿತು. ಮನೋರಮಾ ಪೈಲಾರು ಯೋಜನೆಯಿಂದ ಪಡೆದ ಪ್ರಯೋಜನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net