More

    ನೈಜ ಘಟನೆ ಆಧಾರಿತ ‘ತನುಜಾ’ ಚಿತ್ರದ ಮೋಷನ್ ಪೋಸ್ಟರ್ ಹೊರಬಂತು

    ಬೆಂಗಳೂರು: ಕರೊನಾದಿಂದ ಇಡೀ ದೇಶವೇ ತತ್ತರಿಸಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಒಂದು ಘಟನೆ ನಡೆಯಿತು. ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ತನುಜಾ ಎಂಬ ಹುಡುಗಿ ನೀಟ್​ ಪರೀಕ್ಷೆ ಬರೆಯುವುದಕ್ಕೆ ಕಷ್ಟಪಡುತ್ತಿರುವ ವಿಷಯವನ್ನು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್​ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ಆ ಅಂಕಣ ನೋಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಆ ಹುಡುಗಿಗೆ ಪರೀಕ್ಷೆ ಬರೆಯುವುದಕ್ಕೆ ಸಹಾಯ ಮಾಡಿದ್ದರು. ಈಗ ಅದೇ ಘಟನೆಯನ್ನು ಆಧರಿಸಿ ಹರೀಶ್​ ಎಂ.ಡಿ. ಹಳ್ಳಿ ಎನ್ನುವವರು ಸದ್ದಿಲ್ಲದೆ ಮಾಡಿದ್ದಾರೆ. ಇತ್ತೀಚೆಗೆ ಆ ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆಯಾಗಿದೆ.

    ಇದನ್ನೂ ಓದಿ: ಬಿರಾದಾರ್ @ 500; ಕಲಾವಿದ ನೀರಿನ ತರಹ ಇರಬೇಕು..

    ಈ ಚಿತ್ರದ ಕುರಿತು ಮಾತನಾಡುವ ಹರೀಶ್​ ಎಂ.ಡಿ. ಹಳ್ಳಿ, ‘ವಿಶ್ವೇಶ್ವರ ಭಟ್ ಅವರ ಅಂಕಣದಿಂದ ಪ್ರೇರಿತನಾದ ನಾನು, ಈ ಚಿತ್ರದ ನಿರ್ದೇಶನಕ್ಕೆ ಮುಂದಾದೆ. ನನ್ನ ಹಲವು ಸ್ನೇಹಿತರು ಬಂಡವಾಳ ಹೂಡಿದರು. ಒಂದು ದಿನದಲ್ಲಿ ನಡೆಯುವ ಕಥೆಯಿದು. ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಮುಂತಾದ ಗಣ್ಯರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ’ ಎಂದು ಮಾಹಿತಿ ನೀಡುವುದರ ಜತೆಗೆ ಚಿತ್ರ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳುತ್ತಾರೆ.

    ನಂತರ ಮಾತನಾಡಿದ ವಿಶ್ವೇಶ್ವರ ಭಟ್​, ‘ನಾನು ಮೊದಲು ಪರಿಶ್ರಮ ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್ ಅವರನ್ನು ಅಭಿನಂದಿಸುತ್ತೇನೆ. ಅವರಿಂದಲೇ ತನುಜಾ ಪರೀಕ್ಷೆ ಬರೆಯಲು ಸಾಧ್ಯವಾಗಿದ್ದು‌. ನನ್ನ ಅಂಕಣ ಓದಿ‌ ಹರೀಶ್ ಚಿತ್ರ ಮಾಡಲು ಮುಂದಾದರು. ‘ತನುಜಾ’ ಚಿತ್ರವನ್ನು ಅವರು ಚೆನ್ನಾಗಿ ನಿರ್ದೇಶಿಸಿದ್ದಾರೆ. ನಾನು ಕೂಡ ಅಭಿನಯಿಸಿದ್ದೇನೆ. ಈ ಚಿತ್ರದ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೆ ತಂದಿದ್ದು, ಚಿತ್ರದ ಕೊನೆಯಲ್ಲಿ ಅವರು ಕೆಲವು ಸೆಕೆಂಡ್ ಗಳ ಕಾಲ ಮಾತನಾಡುವ ಸಾಧ್ಯತೆ ಇದೆ’ ಎಂದರು.

    ಈ ಚಿತ್ರದಲ್ಲಿ ತನುಜಾ ಆಗಿ ನಟಿಸಿರುವುದು ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ಸಪ್ತ ಪಾವೂರ್​, ‘ನಾನು ಈ ಸಿನಿಮಾ ಮಾಡದೆ ಹೋಗಿದ್ದರೆ, ನನಗೆ ತುಂಬಾ ನಷ್ಟವಾಗುತ್ತಿತ್ತು. ಈ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನನಗೆ ಖುಷಿಯಾಗಿದೆ’ ಎಂದರು.

    ಇದನ್ನೂ ಓದಿ: ಹುಡುಕಾಟದ ಕಥೆ; ತುಳಸಿ ದಳ ನಿರ್ದೇಶಕರ ಥ್ರಿಲ್ಲರ್ ಚಿತ್ರ

    ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಜರಿದ್ದು, ಇಂತಹ ಒಳ್ಳೆಯ ಪ್ರಯತ್ನ ಮಾಡಿರುವ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

    ಚಂದ್ರಶೇಖರ ಗೌಡ, ಮನೋಜ್ ಬಿ ಜಿ. ಪ್ರಕಾಶ್ ಮದ್ದೂರು ಮುಂತಾದವರು ನಿರ್ಮಿಸಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ಮತ್ತು ರವೀಂದ್ರನಾಥ ಛಾಯಾಗ್ರಹಣವಿದೆ.

    ಲೈಗರ್​ ಸಿನಿಮಾ ಸೋಲು: ನಟಿ ಅನಸೂಯ ವಿರುದ್ಧ ಮುಗಿಬಿದ್ದ ವಿಜಯ್​ ದೇವರಕೊಂಡ ಫ್ಯಾನ್ಸ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts