ಸನ್ಮಾನದಿಂದ ಸಾಧನೆಗೆ ಪ್ರೇರಣೆ

Ism_Fodder crop
Published on

ಕಾಸರಗೋಡು: ಸಾಧಕರಿಗೆ ಹಾಗೂ ಸ್ಪರ್ಧಾ ವಿಜೇತರಿಗೆ ನಡೆಸುವ ಗೌರವಾದರಗಳು ಸನ್ಮಾನಿತರಿಗೆ ಹಾಗೂ ಇತರ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣೆಯಾಗಲಿದೆ ಎಂದು ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಜಿಲ್ಲಾ ಸಂಘ ಉಪಾಧ್ಯಕ್ಷೆ ಉಷಾ ಕಿರಣ್ ಹೇಳಿದರು.

ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಮಂಗಳೂರು ವಿಶ್ವವಿದ್ಯಾಲಯದ 2023-24ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಷಯದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದ ಕಾಸರಗೋಡು ಜಿಲ್ಲೆಯ ಚಿತ್ತಾರಿಯ ಗಿರೀಶ್ ಪಿ.ಎಂ. ಅವರಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ರಾಮರಾಜ ಕ್ಷತ್ರಿಯ ಕೂಡ್ಲು ಉಪಸಂಘ ಅಧ್ಯಕ್ಷ ಸತೀಶ್ ಕೂಡ್ಲು, ವಿಶ್ವ ರಾಮಕ್ಷತ್ರಿಯ ಮಹಾಸಂಘ ಸಂಘಟನಾ ಕಾರ್ಯದರ್ಶಿ ಸಂಧ್ಯಾರಾಣಿ ಟೀಚರ್, ಎಡನೀರು ಹೈಯರ್ ಸೆಕೆಂಡರಿ ಅಧ್ಯಾಪಕ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು. ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ವಿಜೇತರನ್ನು ಅಭಿನಂದಿಸಿದರು. ಕನ್ನಡ ಭವನದ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೋಟೆಕಣಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net