More

    ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

    ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದೇನೆ ಎಂದರು. “ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಚುನಾವಣೆಯಲ್ಲಿ ಯಾರ ಪರವೂ ಕೆಲಸ ಮಾಡದಿರಲು ನಿರ್ಧಾರ ಮಾಡಿದ್ದಾರೆ.

    2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ. ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಬಚ್ಚೇಗೌಡ ಅವರು ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

    ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

    ಬಿ.ಎನ್.ಬಚ್ಚೇಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್.ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಂಸದರಾಗಿದ್ದಾರೆ.

    ಈ ಬಾರಿ ಟಿಕೆಟ್‌ ದೊರಕುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿ ಎನ್ ಬಚ್ಚೇಗೌಡ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದರು. ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ದೂರ ಉಳಿದಿದ್ದರು.

    ಬಚ್ಚೇಗೌಡ ಅವರ ಮಗ ಶರತ್​ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕ ಶರತ್ ಬಚ್ಚೇಗೌಡರ ಮಾವ ಕೆ.ಎಚ್. ಪುಟ್ಟಸ್ವಾಮಿಗೌಡ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ.

    ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಗೂ ಡೀಪ್‌ಫೇಕ್‌ ಕಾಟ; ವಯಸ್ಕರ ವೆಬ್‌ಸೈಟ್‌ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ಕಿರಾತಕರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts