

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ರಕ್ತದಾನ ಶಿಬಿರ ನಡೆಯಿತು. ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ದೇಶದೆಲ್ಲೆಡೆ ಬಿಜೆಪಿ ವತಿಯಿಂದ ಹಾಗೂ ಮೋದಿ ಅವರ ಅಭಿಮಾನಿಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷದಿಂದ ದೇಶದ ಬಡವರ, ರೈತರ, ಮಹಿಳೆಯರ ಕ್ಷೇಮಾಭಿವೃದ್ಧಿಗೆ ದುಡಿದು
ಭಾರತವನ್ನು ಆರ್ಥಿಕವಾಗಿ ಐದನೇ ದೊಡ್ಡ ದೇಶವನ್ನಾಗಿ ಮಾಡುವಲ್ಲಿ ಶ್ರಮ ವಹಿಸಿದ್ದಾರೆ ಎಂದು ಅವರು ಹೇಳಿದರು.
ಅ.2ರವರೆಗೆ ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ಅಯುಷ್ಮಾನ್ ಕಾರ್ಡ್ ಬಗ್ಗೆ ಮಾಹಿತಿ, ಹೊಸ ಕಾರ್ಡ್ ಮಾಡಿಸುವುದು, ಬೂತ್ ಮಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ, ಪಕ್ಷದ ಸದಸ್ಯತನ ಅಭಿಯಾನ ಸಹಿತ ಹಲವು ಸೇವಾ ಕಾರ್ಯಗಳು ನಡೆಯಲಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದರು.
ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪ್ರಸನ್ನ ಮಾರ್ತ, ಗುರುಚರಣ್ ಮುಂತಾದವರು ಉಪಸ್ಥಿತರಿದ್ದರು.