ಚಿತ್ರದುರ್ಗ ಲೋಕಸಭೆ ಕ್ಷೇತ್ರ: 25ರಂದು ಸಂಸದ ಚಂದ್ರಪ್ಪ ನಾಮಪತ್ರ ಸಲ್ಲಿಕೆ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಲಿದ್ದಾರೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫಾತ್ಯರಾಜನ್ ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10.30ಕ್ಕೆ ಕನಕ ವೃತ್ತದಿಂದ ಜೆಡಿಎಸ್-ಕಾಂಗ್ರೆಸ್ ಕಾರ‌್ಯಕರ್ತರ ಮೆರವಣಿಗೆ ಆರಂಭವಾಗಲಿದೆ. ಒನಕೆ ಒಬವ್ವ ವೃತ್ತದಲ್ಲಿ ಕಾರ‌್ಯಕರ್ತರನ್ನು ಉದ್ದೇಶಿಸಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ‌್ಯಾಧ್ಯಕ್ಷ ಈಶ್ವರಪ್ಪ ಖಂಡ್ರೆ ಮೊದಲಾದ ಪ್ರಮುಖರು ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಪ್ರತಿನಿಧಿಯಾಗಿ ಪ್ರಮುಖ ನಾಯಕರೊಬ್ಬರು ಜೆಡಿಎಸ್ ಪರವಾಗಿ ಭಾಗವಹಿಸಲಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ್, ಮುಖಂಡ ಬಿ.ಕಾಂತರಾಜ್ ಮೊದಲಾದವರು ಇದ್ದರು.