More

    ಮುಖದ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಸಂತ್ರಸ್ತನ ಪಾದ ತೊಳೆದ ಮಧ್ಯಪದೇಶ ಮುಖ್ಯಮಂತ್ರಿ

    ಮಧ್ಯಪ್ರದೇಶ: ವ್ಯಕ್ತಿಯೊರ್ವನಿಂದ ಮುಖದ ಮೇಲೆ ಮೂತ್ರ ವಿಸರ್ಜನೆಗೆ ಒಳಗಾದ ಬುಡಕಟ್ಟು ವ್ಯಕ್ತಿ ದಶರಥ್ ರಾವತ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿದ್ದಾರೆ. ಭೋಪಾಲ್‌ನಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಈ ವೇಳೆ ಸಂತ್ರಸ್ತನ ಪಾದಗಳನ್ನು ತೊಳೆದಿದ್ದಾರೆ.

    ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವೈರಲ್ ವಿಡಿಯೋವನ್ನು ಉಲ್ಲೇಖಿಸಿ, “ಆ ವಿಡಿಯೋ ನೋಡಿ ನನಗೆ ನೋವಾಯಿತು. ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಜನರು ನನಗೆ ದೇವರಂತೆ” ಎಂದು ಚೌಹಾಣ್ ರಾವತ್‌ಗೆ ಹೇಳಿದ್ದರು.

    ಮೊದಲು ಮುಖ್ಯಮಂತ್ರಿ ರಾವತ್ ಅವರು, ಕುರ್ಚಿಯ ಮೇಲೆ ಕೂರಿಸಿ ಅವರ ಪಾದಗಳನ್ನು ತೊಳೆದಿದ್ದಾರೆ. ಬಿಳಿ ಬಟ್ಟೆಯಿಂದ ವರೆಸಿ ಅವರಿಗೆ ಮಾಲಾರ್ಪಣೆ ಮಾಡಿದ್ದಾರೆ. ಹಣೆಯ ಮೇಲೆ ತಿಲಕವನ್ನು ಹಚ್ಚಿ ಮಾಲೆಯನ್ನು ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.

    ಪ್ರವೇಶ್ ಶುಕ್ಲಾ ಮನೆ ಧ್ವಂಸ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೇಶ್ ಶುಕ್ಲಾ ಅವರ ಮನೆಯನ್ನು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕೆಡವಲಾಗಿದೆ. ಮಂಗಳವಾರ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

    ನೀಲಿ ತಾರೆ ಜತೆ ಸೆನ್ಸೇಷನಲ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts