More

    ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ

    ಮಂಗಳೂರು: ದ.ಕ.ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಒದಗಿಸುವುದರೊಂದಿಗೆ ಮೊಬೈಲ್ ಸೇವಾ ಪೂರೈಕೆದಾರರು ಉತ್ತಮ ಸೇವೆಯನ್ನು ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮಂಗಳೂರಿನ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಕುರಿತ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇದೆ. ಸರ್ಕಾರದ ಅನೇಕ ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಿಳಿಸಲು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು, ಪಡಿತರ ವಿತರಣೆ, ಜಿಪಿಎಸ್ ಆಧಾರದ ಮೇಲೆ ಗೃಹ ನಿರ್ಮಾಣದ ಅನುದಾನ ಬಿಡುಗಡೆ ಮತ್ತಿತರ ಕಾರ್ಯ ಕೈಗೊಳ್ಳಲು ಸಾಧ್ಯವಾಗಿಲ್ಲ.

    ಶಾಲೆ, ಕಾಲೇಜುಗಳ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ಇದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ವರ್ಕ್ ಫ್ರಮ್ ಹೋಮ್‌ನಡಿ ಕಾರ್ಯನಿರ್ವಹಿಸುತ್ತಿರುವವರಿಗೆ ತೊಂದರೆಯಾಗಿದೆ. ಸರ್ಕಾರ ಸ್ವಾಮ್ಯದ ಬಿಎಸ್‌ಎನ್‌ಎಲ್ ಮುಂಚೂಣಿ ಟೆಲಿ ಕಂಪನಿಯಾಗಿದ್ದರೂ ಗ್ರಾಹಕರಿಗೆ ಗುಣಮಟ್ಟದ ಸೇವೆ ಸಿಗುತ್ತಿಲ್ಲ. ಉತ್ತಮ ನೆಟ್‌ವರ್ಕ್ ಸೌಲಭ್ಯವನ್ನು ಒದಗಿಸಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಪಂ ಸಿಇಒ ಡಾ.ಕುಮಾರ್ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts