More

    ಲೋಕಸಭೆ ಚುನಾವಣೆ; ಒಗ್ಗಟ್ಟಿನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವಕುಮಾರ್‌ಗೆ ದೊಡ್ಡ ಸವಾಲು

    ಬೆಂಗಳೂರು:
    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಒಗ್ಗಟ್ಟಿನಿಂದ ಪ್ರತಿ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ಸವಾಲಾಗಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪಕ್ಷದಲ್ಲಿಯೂ ಒಗ್ಗಟ್ಟು ಕಾಯ್ದುಕೊಳ್ಳುವುದು ಮಹತ್ವದ ಸಂಗತಿಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧೆ ಎದುರಿಸಿ ಕೆಲಸ ಮಾಡಿದ ಕಾರಣ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ ಎನ್ನುವುದು ಪಕ್ಷದ ಮುಖಂಡರಿಗೆಲ್ಲ ಮನದಟ್ಟಾಗಿದೆ.
    ಪ್ರತಿ ಜಿಲ್ಲೆಯಲ್ಲಿ ನಾನಾ ಕಾರಣಕ್ಕಾಗಿ ಇರುವ ಮುಖಂಡರುಗಳ ಬಣವನ್ನು ಒಂದಾಗಿಸುವುದು ಮತ್ತು ಅವರಲ್ಲಿ ಅದೇ ಉತ್ಸಾಹ ಮತ್ತು ಒಗ್ಗಟ್ಟು ಕಾಯ್ದುಕೊಳ್ಳುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ಜವಬ್ದಾರಿಯ ಹೊರೆಯನ್ನು ಹೆಚ್ಚಿಸಿದೆ.
    ಲೋಕಸಭೆಗೆ ರಾಜ್ಯದಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎನ್ನುವ ಹೈಕಮಾಂಡ್ ನಿರೀಕ್ಷೆ. ಈ ನಿಟ್ಟಿನಲ್ಲಿಯೇ ಈಗಿನಿಂದಲೇ ಕಾರ್ಯೋನ್ಮುಖರಾಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಪ್ರತಿ ಕ್ಷೇತ್ರದಿಂದಲೂ ಪ್ರಬಲ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ತರುವಂತೆ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಈ ನಿಟ್ಟಿನಲ್ಲಿ ಸಭೆ ನಡೆಸಿರುವ ಸಚಿವರುಗಳ ತಂಡ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ನಡೆಸಿ ಮಾಹಿತಿ ಸಂಗ್ರಹಿಸಿದೆ. ಇನ್ನೊಮ್ಮೆ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸಿ ಪಟ್ಟಿಯನ್ನು ಸಿದ್ಧಪಡಿಸಿ ಕೆಪಿಸಿಸಿಗೆ ಕೊಡಲಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
    ಬಿಜೆಪಿ ಈಗಾಗಲೇ ಲೋಕಸಭೆ ಚುನಾವಣೆಗೆ ಬಿರುಸಿನ ತಯಾರಿ ಮಾಡುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ಕೂಡ ಯಾವುದೇ ಹಂತದಲ್ಲಿ ಹಿಂದೆ ಬೀಳಬಾರದು. ವಿಧಾನಸಭೆ ಚುನಾವಣೆಗೆ ತೋರಿಸಿದ ಒಗ್ಗಟ್ಟು ಈಗಲೂ ತೋರಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆಯನ್ನು ನೀಡಲಾಗಿದೆ. ಯಾರಿಗೆ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡುವ ರೀತಿಯಲ್ಲಿ ಪ್ರಮುಖ ಮುಖಂಡರ ನಡುವೆ ಸಮನ್ವಯತೆ ಸಾಧಿಸಬೇಕು ಎಂದು ಉಸ್ತುವಾರಿಗಳಿಗೂ ಸೂಚಿಸಲಾಗಿದೆ.
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಿರುವ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡಲು ಕಾರ್ಯಕರ್ತರು ಮುಂದಾಗಬೇಕು. ಪ್ರತಿ ಬೂತ್ ಮಟ್ಟದಲ್ಲಿಯೂ ಸಭೆಗಳನ್ನು ನಡೆಸಿ ತಾಲೂಕು ಮತ್ತು ಜಿಲ್ಲಾ ಸಮಿತಿಗಳಿಗೆ ಮಾಹಿತಿ ನೀಡಬೇಕು ಎಂದು ಕೆಪಿಸಿಸಿ ತಾಕೀತು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts