ಉರುಳುವ ಭೀತಿಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ; ಬೆಂಗಳೂರಿಗೆ ಬಂದಿಳಿದ 17 ಕಾಂಗ್ರೆಸ್​ ಶಾಸಕರು

KAMAL NATH
Published on

ಬೆಂಗಳೂರು: ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗರು ಎನ್ನಲಾದ 5 ಸಚಿವರು ಸೇರಿ 17 ಕಾಂಗ್ರೆಸ್​ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ನಡೆದ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿರುವ ಕಾಂಗ್ರೆಸ್ ರಾಜ್ಯ ಸರ್ಕಾರ, ಉರುಳುವ ಭೀತಿಯಲ್ಲಿದೆ. ಈ ಪರಿಸ್ಥಿತಿ ಬಗ್ಗೆ ಮುಖುಮಂತ್ರಿ ಕಮಲ್​ ನಾಥ್​ ಅವರು ಇಂದು ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್​ ಸಚಿವ ಮತ್ತು ಶಾಸಕರು ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಕಾಂಗ್ರೆಸ್​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಮಧ್ಯಪ್ರದೇಶ ಸಿಎಂ ಕಮಲ್​ ನಾಥ್ ಜತೆ ದೂರವಾಣಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ವಿಧಾನಸಭಾ ಲಾಂಜ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಡಿಸಿಎಂ ಜತೆ ಪರಮೇಶ್ವರ್ ಚರ್ಚೆ ನಡೆದಿದೆ.

ಮಧ್ಯಪ್ರದೇಶ್ ಎಂಪಿಸಿಸಿ ಇಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕರೆ ಬಂದಿದ್ದು, "ಶಾಸಕರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ. ಸಂಪರ್ಕ ಸಾಧಿಸಿ ವಾಪಸ್ ಕಳುಹಿಸುವಂತೆ ಕೆಪಿಸಿಸಿ ಅಧ್ಯಕ್ಷರ ಬಳಿ ಮನವಿ ಮಾಡಿದ ಮಧ್ಯಪ್ರದೇಶದ ಎಂಪಿಸಿಸಿ ಮನವಿ ಮಾಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರೂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್​, ಡಿ.ಕೆ.ಶಿವಕುಮಾರ್​, ಪರಮೇಶ್ವರ್​ ಅವರಿಗೆ ಕರೆ ಮಾಡಿ ಶಾಸಕರನ್ನು ಸಂಪರ್ಕ ಮಾಡುವಂತೆ ಸೂಚನೆ ನೀಡಿದ್ದಾರೆ.

ದೆಹಲಿಯಲ್ಲಿ ಇಂದು ರಾತ್ರಿ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧ್ಯಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭೇಟಿ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net