ರಾಯಚೂರು ರಾಜ್ಯ ಸರ್ಕಾರದ ಅಭಿವೃದ್ದಿಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜೂ.12ರಿಂದ 18ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾಹಿತಿ ಪ್ರದರ್ಶನ ಮಳಿಗೆಗೆ ಸಂಸದ ಜಿ.ಕುಮಾರ ನಾಯಕ ಅವರು ಗುರುವಾರ ಚಾಲನೆ ನೀಡಿದರು.
ನಂತರ ಮಾತನಾಡಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ನೀಡಿದ ನೆರವು, ವಸತಿ ರಹಿತರಿಗೆ ಸೂರು ಕಲ್ಪಿಸಿದ್ದು, ವಿದ್ಯಾಸಿರಿ ಯೋಜನೆ, ಇಂದಿರಾ ಕ್ಯಾಂಟೀನ್ ಆರೋಗ್ಯ ಯೋಜನೆಗಳು ಸೇರಿದಂತೆ ನಾನಾ ಮಾಹಿತಿಯ ಫಲಕಗಳನ್ನು ಸಂಸದರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಪರಿಚಯಿಸುವ ಈ ಪ್ರದರ್ಶನ ಚೆನ್ನಾಗಿ ಮೂಡಿ ಬಂದಿದೆ.್ ಶುಭಾಶಯಗಳು ಎಂದು ಇದೆ ವೇಳೆ ಸಂಸದರು ವಿಜಿಟ್ ಬುಕನಲ್ಲಿ ಬರೆದು ಸಂತೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ಕಾರ್ಯದರ್ಶಿ ಪತಂಗೆ ಜಯವಂತರಾವ್,ಕೆಕೆಆರ್‌ಟಿಸಿ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ, ರಾಯಚೂರ ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ, ಪ್ರಕಾಶ, ಲಿಂಗರಾಜ್, ರಮೇಶ, ವೆಂಕಟೇಶ ಇದ್ದರು.