ಕಾರವಾರ: ಉತ್ತರ ಕನ್ಮಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ಸೋಮವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಾಮ್‌ರವರನ್ನು ಭೇಟಿಯಾಗಿ ಚರ್ಚಿಸಿದರು.
ಅತಿಕ್ರಮಣ ದಾರರ ಹಕ್ಕು ಮಾನ್ಯ ಮಾಡುವಲ್ಲಿ ಆಗುತ್ತಿರುವ ತೊಂದರೆಯನ್ನು ವಿವರಿಸಿದರು. ಜಿಲ್ಲೆಯಲ್ಲಿ ಶೇ.80 ರಷ್ಟು ಅರಣ್ಯ ಭೂಮಿ ಇದ್ದು, 80 ಸಾವಿರಕ್ಕೂ ಅಧಿಕ ಜನ ಅರಣ್ಯ ಅತಿಕ್ರಮಣದಾರರು ಅರಣ್ಯ ಹಕ್ಕಿಗಾಗಿ ಅರ್ಜಿ ಸಲ್ಲಿಸಿ, ಕಾಯುತ್ತಿದ್ದಾರೆ. ಆದರೆ, ಅರಣ್ಯ ಹಕ್ಕು ನೀಡಲು 25 ವರ್ಷಗಳ ದಾಖಲೆ ನೀಡಬೇಕು ಎಂಬ ನಿಯಮ ಅಡ್ಡಿಯಾಗಿದೆ. ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು. ಅದಕ್ಕೆ ಸನ್ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.