ಗ್ವಾಲಿಯರ್: ಸುಗಂಧ ದ್ರವ್ಯ ಹಾಕಿಕೊಂಡಿದ್ದಕ್ಕೆ ಹೆಂಡತಿಯನ್ನು ಗುಂಡಿಕ್ಕಿರುವ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.
ಇದನ್ನೂ ಓದಿ: ದೇವಸ್ಥಾನದ ಮೇಲೆ ದಾಳಿ: ಏಕಾಏಕಿ ಐದಾರು ವಿಗ್ರಹ ಧ್ವಂಸಗೊಳಿಸಿದ ಆರೋಪಿ ಅರೆಸ್ಟ್
ಮಹೇಂದ್ರ ಜಾತವ್ ಎಂಬಾತನೇ ತನ್ನ ಹೆಂಡತಿಯ ಮೇಲೆ ಗುಂಡು ಹಾರಿಸಿರುವ ಆರೋಪಿಯಾಗಿದ್ದು, ನೀಲಮ್ ಜಾತವ್ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆಯ ನಂತರ ಆರೋಪಿಯು ಪರಾರಿಯಾಗಿದ್ದು, ನೀಲಂ ಕುಟುಂಬದವರು ನೀಡಿದ ದೂರಿನ ಮೇರೆಗೆ ಮಹೇಂದ್ರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಘಟನೆ ಹಿನ್ನೆಲೆ:
ಬಿಜೋಯಿಲಿ ಠಾಣಾ ವ್ಯಾಪ್ತಿಯ ಗಣೇಶಪುರ ನಿವಾಸಿ ಮಹೇಂದ್ರ ಜಾತವ್, ಎಂಟು ವರ್ಷಗಳ ಹಿಂದೆ ನೀಲಮ್ ಎಂಬಾಕೆಯೊಂದಿಗೆ ವಿವಾಹವಾಗಿದ್ದನು. ಕ್ರಿಮಿನಲ್ ಇತಿಹಾಸ ಹೊಂದಿರುವ ಮಹೇಂದ್ರ, ಕೆಲ ಸಮಯದವರೆಗೆ ಜೈಲು ಪಾಲಾಗಿದ್ದನು. ಅನಂತರದಲ್ಲಿ ನೀಲಮ್ ತನ್ನ ಪೋಷಕರೊಂದಿಗೆ ವಾಸಿಸಲು ಪ್ರಾರಂಭಿಸಿದ್ದಳು.
ಇದನ್ನೂ ಓದಿ: ದೇವಸ್ಥಾನದ ಮೇಲೆ ದಾಳಿ: ಏಕಾಏಕಿ ಐದಾರು ವಿಗ್ರಹ ಧ್ವಂಸಗೊಳಿಸಿದ ಆರೋಪಿ ಅರೆಸ್ಟ್
ನಾಲ್ಕು ವರ್ಷಗಳ ಶಿಕ್ಷೆಯನ್ನು ಅನುಭವಿಸಿದ ನಂತರ, ಮಹೇಂದ್ರ ಕಳೆದ ವರ್ಷದಿಂದ ತನ್ನ ಹೆಂಡತಿ ಮತ್ತು ಅವಳ ಹೆತ್ತವರ ಮನೆಯಲ್ಲಿ ವಾಸವಾಗಿದ್ದ. ಇಂದು ನೀಲಮ್ ತನ್ನ ಮನೆಯಿಂದ ಹೊರಡಲು ತಯಾರಿ ನಡೆಸುತ್ತಿದ್ದಾಗ ಆಕೆಯ ಗಂಡ, ಸುಗಂಧ ದ್ರವ್ಯವನ್ನು ಧರಿಸಿರುವ ಬಗ್ಗೆ ಪ್ರಶ್ನೆ ಕೇಳಿದ್ದು, ಇದು ದಂಪತಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಕೂಡಲೇ ಜಗಳ ವಿಕೋಪಕ್ಕೆ ಹೋಗಿದ್ದು, ಕೋಪದ ಭರಾಟೆಯಲ್ಲಿ ಮಹೇಂದ್ರ, ಗನ್ ತೆಗೆದು ಪತ್ನಿಯ ಎದೆಗೆ ಗುಂಡು ಹಾರಿಸಿದ್ದಾನೆ. ನೀಲಮ್ಳ ಸಹೋದರ ದಿನೇಶ್ ಕೂಡಲೇ ಸಂಬಂಧಿಕರಿಗೆ ಕರೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನೀಲಂ ಕುಟುಂಬದವರು ನೀಡಿದ ದೂರಿನ ಮೇರೆಗೆ ಮಹೇಂದ್ರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.(ಏಜೆನ್ಸೀಸ್)
ಸುಗಂಧ ದ್ರವ್ಯ ಹಾಕಿಕೊಂಡಿದ್ದಕ್ಕೆ ಪತ್ನಿಗೆ ಶೂಟ್ ಮಾಡಿದ ಪತಿ ಎಸ್ಕೇಪ್: ಹಿನ್ನೆಲೆ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ..

You Might Also Like
ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt
Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…
ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit
Vomit : ಕೆಲವರಿಗೆ ಬಸ್ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…
ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon
Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…