ಹಾಸನ: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಬೇಲೂರು ತಾಲೂಕಿನ 22 ಗ್ರಾಮಗಳ ದಾಖಲೆಗಳನ್ನೇ ಕಳೆದು ಹಾಕಿದ್ದು, ಮಧ್ಯಾಹ್ನದ ವೇಳೆಗೆ ಅಧಿಕಾರಿಗಳು ಬಂದು ಮಾಹಿತಿ ನೀಡದಿದ್ದರೆ ನಾಳೆಯಿಂದ ಕೆಲಸ ನಿಲ್ಲಿಸುತ್ತೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಚ್ಚರಿಕೆ ನೀಡಿದರು.
ಜಿಪಂ ಸಭಾಂಗಣದಲ್ಲಿ ನಡೆಯುತ್ತಿರುವ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಬಯಲು ಸೀಮೆ ಜನರಿಗೆ ಒಳ್ಳೆಯದಾಗಲಿ ಎಂದು ನಮ್ಮರೈತರು ಭೂಮಿ ನೀಡಿದ್ದಾರೆ. ಆದರೆ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕಳೆದಿದ್ದಾರೆ. ಯಾವ ಕಾರಣಕ್ಕೆ ಹೀಗೆಲ್ಲ ಆಗ್ತಿದೆ ಗೊತ್ತಿಲ್ಲ, ಬಡವರ ಹೊಟ್ಟೆ ಮೇಲೆ ಹೊಡೆಯಲು ಬಿಡುವುದಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಧುಸೂದನ್ ಗೆ ಸೂಚಿಸಿದರು.