More

    ಮೊದಲ ಬಾರಿ ಗೆದ್ದ ಶಾಸಕರು ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕೆಂದು ತಿಳಿದುಕೊಳ್ಳಲಿ! ಪ್ರತಾಪ್ ಸಿಂಹ ಟಾಂಗ್

    ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಆದಷ್ಟು ಬೇಗ ಮೊದಲ ಬಾರಿಗೆ ಗೆದ್ದ ಶಾಸಕರಿಗೆ, ಹಿರಿಯ ಶಾಸಕರು ಓರಿಯಂಟೇಶನ್ ಕಾರ್ಯಕ್ರಮ ನೀಡುವ ಅಗತ್ಯವಿದೆ. ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು, ಹೇಗೆ ಕೆಲಸ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಲು ಹೇಳಿ ಎನ್ನುತ್ತಾ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್​ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.

    ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ತಾಕತ್ತಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಿ ವಿತರಿಸಲಿ: ಮಾಜಿ ಸಿಎಂ ಬೊಮ್ಮಾಯಿ‌

    ಬಹಿರಂಗ ಚರ್ಚೆಗೆ ಆಹ್ವಾನಿಸಿದ ಶಾಸಕ ಪ್ರದೀಪ್ ಈಶ್ವರ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಮೊದಲ ಬಾರಿ ಗೆದ್ದ ಶಾಸಕರು ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು, ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಲು ಹೇಳಿ ಎಂದರು.

    ಏನಿದು ಬಹಿರಂಗ ಚರ್ಚೆ ಆಹ್ವಾನ?

    ಚಿಕ್ಕಬಳ್ಳಾಪುರದಲ್ಲಿ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಮಾತನಾಡುತ್ತಾ, ಬಡವರಿಗೆ ಅಕ್ಕಿ ನೀಡದ, ಕಣ್ಣೀರು ಒರೆಸದ ಬಿಜೆಪಿಯಿಂದ ಯಾವ ಅಭಿವೃದ್ಧಿ ಸಾಧ್ಯ. ಅನ್ನಭಾಗ್ಯ ಯೋಜನೆಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸುತ್ತಿದ್ದಾರೆ. ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ರವಾನಿಸಬೇಕು ಎನ್ನುವುದು ಇವರ ಉದ್ದೇಶ. ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ವಿಚಾರವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts