More

    ಹೇಮರಡ್ಡಿ ಮಲ್ಲಮ ದೇವಸ್ಥಾನಕ್ಕೆ 4 ಕೋಟಿ ರೂ.: ಸಂಸದ ಸಂಗಣ್ಣ ಕರಡಿ ಹೇಳಿಕೆ

    ಕೊಪ್ಪಳ: ಸಿಎಂ ಅವರ ವಿವೇಚನಾ ನಿಧಿಯಿಂದ ಪಂಚಮಸಾಲಿ ಸಮಾಜಕ್ಕೆ 5 ಕೋಟಿ ರೂ. ಹಾಗೂ ರಡ್ಡಿ ಸಮುದಾಯಕ್ಕೆ 4 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.


    ನಗರದ ಕಿನ್ನಾಳ ರಸ್ತೆಯಲ್ಲಿರುವ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ಶಿವರಾತ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಮೂಲ ಸೌಕರ್ಯ ಒದಗಿಸುವುದು ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸಿಎಂ ವಿವೇಚನಾ ನಿಧಿಯಿಂದ 4 ಕೋಟಿ ರೂ. ಬಿಡುಗಡೆಯಾಗಲಿದೆ. ಈ ಹಿಂದೆ ಸಮಾಜದ ನಿಯೋಗದೊಂದಿಗೆ ಸಿಎಂರನ್ನು ಭೇಟಿಯಾಗಿ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಬಸವರಾಜ ಬೊಮ್ಮಾಯಿ, ನಾಲ್ಕು ಕೋಟಿ ರೂ. ನೀಡುವುದಾಗಿ ಹೇಳಿದ್ದಾರೆ ಎಂದರು.

    ರಡ್ಡಿ ಸಮುದಾಯದವರು ಶ್ರಮಜೀವಿಗಳಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ಸಮಾಜಮುಖಿ ಕಾರ್ಯದಲ್ಲಿಯೂ ಅವರ ಕೊಡುಗೆ ಅಪಾರವಾಗಿದೆ ಎಂದರು.

    ಬಿಜೆಪಿ ಮುಖಂಡ ಸಿ.ವಿ. ಚಂದ್ರಶೇಖರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಮೈನಳ್ಳಿ ಮಾತನಾಡಿದರು. ರಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಜಗದೀಶಪ್ಪ ಸಿಂಗನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಕಿಮ್ಸ್ ನಿರ್ದೇಶಕ ವಿಜಯಕುಮಾರ ಇಟಗಿ, ನಗರಸಭೆ ಅಧ್ಯಕ್ಷೆ ಶಿವಗಂಗ ಶಿವರಡ್ಡಿ ಭೂಮಕ್ಕನವರ, ಮುಖಂಡರಾದ ಬಸವರಾಜ ಪುರದ, ಪ್ರಭು ಹೆಬ್ಬಾಳ, ಕಾಶಿನಾಥರಡ್ಡಿ ಅವಾಜಿ, ವೆಂಕಾರಡ್ಡಿ ವಕೀಲರು, ರಮೇಶರಡ್ಡಿ ಮೂಲಮನಿ, ಶಂಕರಗೌಡ ಹಿರೇಗೌಡ್ರ, ಸೋಮರಡ್ಡಿ ಅಳವಂಡಿ, ವೀರನಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts