

ಬೆಂಗಳೂರು: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್ ಜಾಧವ್ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಸದರಿಗೆ ಸೋಮವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿರಿ ದಿನೇಶ್ ಗುಂಡೂರಾವ್ಗೆ ಕರೊನಾ, ಸದನಕ್ಕೆ ಬಂದವರಲ್ಲಿ ಆತಂಕ
ಈ ಬಗ್ಗೆ ಸಂಸದರೇ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 'ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪರೀಕ್ಷೆಗೆ ಒಳಗಾಗಿದ್ದು, ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಭಯ ಪಡುವಂತಹದ್ದು ಏನೂ ಆಗಿಲ್ಲ. ಶೀಘ್ರದಲ್ಲೇ ಗುಣಮುಖನಾಗುತ್ತೇನೆ' ಎಂದು ತಿಳಿಸಿದ್ದಾರೆ.
ಸದ್ಯ ಕರೊನಾ ಸೋಂಕಿನಿಂದ ಬಳಲುತ್ತಿರುವ ಸಚಿವ ಮಾಧುಸ್ವಾಮಿ, ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.