More

    ಸಿದ್ದರಾಮಯ್ಯ ಪಲಾಯನವಾದಿ: ವಿ.ಶ್ರೀನಿವಾಸಪ್ರಸಾದ್

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಲಾಯನವಾದಿಯಾಗಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಟೀಕಿಸಿದ್ದಾರೆ.
    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಸೋಲಿನ ಭೀತಿ ಕಾಡುತ್ತಿದೆ. ಹೀಗಾಗಿ ವರುಣ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದರು.

    ಸಿದ್ದರಾಮಯ್ಯ ಧಿಮಾಕಿನಿಂದ ಹೇಳುತ್ತಿದ್ದಾರೆ

    ವರುಣ ಕ್ಷೇತ್ರಕ್ಕೆ ಕೇವಲ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ, ಚುನಾವಣೆ ಪ್ರಚಾರಕ್ಕೆ ಬರುವುದಿಲ್ಲ ಎಂದು ಧಿಮಾಕಿನಿಂದ ಹೇಳುತ್ತಿದ್ದಾರೆ. ಇಂತಹ ಧಿಮಾಕಿನ ಮಾತಿನಿಂದಲೇ ಸಿದ್ದರಾಮಯ್ಯಗೆ ಈ ಹಿಂದೆ ಸೋಲಾಗಲಿದೆ. ಸಿದ್ದರಾಮಯ್ಯ ವರುಣದಲ್ಲಿ ಗೆಲ್ಲುವುದು ಸುಲಭವಲ್ಲ. ಹೀಗಾಗಿ ಕೋಲಾರದಿಂದಲೂ ಟಿಕೆಟ್ ಕೇಳುತ್ತಿದ್ದಾರೆ. ವರುಣದಲ್ಲಿ ಗೆಲ್ಲುವ ವಿಶ್ವಾಸ ಇಲ್ಲದ ಕಾರಣ ಕೋಲಾರದಿಂದಲೂ ಟಿಕೆಟ್ ಕೇಳುತ್ತಿದ್ದಾರೆ ಎಂದು ಕುಟುಕಿದರು.

    ಬಿಜೆಪಿಗೆ ಅನುಕೂಲವಾಗಲಿದೆ

    ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ಸಂಸದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡಿರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮಾಜಿ ಸಚಿವ ಎಲ್.ಆರ್. ಶಿವರಾಮೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರಿರುವುದು ಒಳ್ಳೆಯ ಬೆಳವಣಿಗೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪ್ರಯತ್ನ ಮಾಡಿದ್ದು ಫಲ ನೀಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯದಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts