ಸಿನಿಮಾ

ಮೇ.೧೩,೧೪ ರಂದು ಎಂ.ಪಿ.ಎಲ್ ಲೀಗ್ ಕ್ರಿಕೆಟ್ ಪಂದ್ಯಾವಳಿ

ಮಡಿಕೇರಿ: ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ಹಾಗೂ ಕೊಡಗು ಜಿಲ್ಲಾ ಮರಾಠ, ಮರಾಠಿ ಸಮಾಜ ಸೇವಾ ಸಂಘ ತಾಳತ್ತಮನೆ ವತಿಯಿಂದ ಮೇ೧೩ ಮತ್ತು ೧೪ ರಂದು ಎಂ.ಪಿ.ಎಲ್ ಸೀಸನ್-೧ ಕ್ರಿಕೆಟ್ ಪಂದ್ಯಾವಳಿ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಯುವಕ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಬೇರೆ ಜಿಲ್ಲೆ ಅಥವಾ ರಾಜ್ಯದ ಸ್ವಜಾತಿ ಪ್ರತಿ ತಂಡದಲ್ಲಿ ಇಬ್ಬರು ಅತಿಥಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.


ಪ್ರಥಮ ಬಹುಮಾನ ರೂ.೨೫ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.೧೫ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ತೃತೀಯ ಬಹುಮಾನ ರೂ.೫ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ೪ನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಮತ್ತು ಇತರ ವೈಯುಕ್ತಿಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಎಂ.ಆರ್.ಮೋಹನ್-೭೦೯೦೩೨೭೬೮೪, ಸಂತೋಷ್ ೯೬೮೬೩ ೧೭೦೬೨ ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Latest Posts

ಲೈಫ್‌ಸ್ಟೈಲ್