More

    ಸಂಸದನ ರಕ್ಷಣೆ ಖಂಡನಾರ್ಹ: ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    ಹಗರಿಬೊಮ್ಮನಹಳ್ಳಿ: ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಪಟ್ಟಣದ ತಹಸಿಲ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

    ನಿಷ್ಪಕ್ಷಪಾತ ತನಿಖೆ ನಡೆಯಬೇಕು

    ಜನವಾದಿ ಮಹಿಳಾ ಸಂಘಟನೆ ತಾಲೂಕು ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ ಮಾತನಾಡಿ, ಒಲಿಂಪಿಕ್ ಪದಕ ವಿಜೇತ ಮಹಿಳಾ ಕುಸ್ತಿಪಟುಗಳು ದೂರು ನೀಡಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ. ಸುಪ್ರೀಂಕೊರ್ಟ್ ಮಧ್ಯೆಪ್ರವೇಶಿಸಿ ಎಫ್‌ಐಆರ್ ದಾಖಲಿಸಲು ಮುಂದಾಗಿರುವುದು ನಾಚಿಕೆಗೇಡಿತನವಾಗಿದೆ. ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಕುಸ್ತಿಪಟುಗಳ ಆರೋಪದ ಹಿನ್ನಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿ ವರದಿಯನ್ನು ಸಾರ್ವಜನಿಕ ಅವಗಾಹನೆಗೆ ತರಬೇಕು.


    ಇದನ್ನೂ ಓದಿ:ಬ್ರಿಜ್​ ವಿರುದ್ಧ ಮುಂದುವರಿದ ಧರಣಿ: ಭಾರತೀಯ ಒಲಿಂಪಿಕ್​ ಅಸೋಸಿಯೇಷನ್ ಮುಂದೆ 4 ಬೇಡಿಕೆಯಿಟ್ಟ ಕುಸ್ತಿಪಟುಗಳು

    ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕಾನೂನು ಕ್ರಮವಹಿಸಬೇಕು

    ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಪ್ರಚಾರ ಮಾಡುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ಖಂಡನಾರ್ಹ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕಾನೂನು ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ತಹಸೀಲ್ದಾರ್ ಚಂದ್ರಶೇಖರ್ ಶಂಭಣ್ಣಗೆ ಶುಕ್ರವಾರ ಮನವಿ ಸಲ್ಲಿಸಿದರು. ಪ್ರಾಂತ ರೈತ ಸಂಘದ ಕೊಟಗಿ ಮಲ್ಲಿಕಾರ್ಜುನ, ಎಂ.ಆನಂದ, ಜನವಾದಿ ಮಹಿಳಾ ಸಂಘಟನೆ ಕೂಡ್ಲಿಗಿ ತಾಲೂಕಾಧ್ಯಕ್ಷೆ ಸಿ.ಲಕ್ಷ್ಮೀದೇವಿ, ಪ್ರಮುಖರಾದ ಗುರುಬಸಮ್ಮ, ಟಿ.ಭಾಗ್ಯ, ಬಿ.ಮೈಲಪ್ಪ, ಜೆ.ರೇಖಾ, ಗೌರಮ್ಮ, ಪ್ರಶಾಂತ, ವೀರಣ್ಣ ಕಲ್ಮನಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts