ಬೆಂಗಳೂರು: ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ, ಈ ಡಿ.ಕೆ. ಶಿವಕುಮಾರ್ ನಿನ್ನ ಹಾಗೂ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ ಎಂದು ಡಿಸಿಎಂ DK ಶಿವಕುಮಾರ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಸೂರ್ಯನ ಬೆಳಕಲ್ಲದೆ ಈ ಆಹಾರಗಳಿಂದಲೂ ಕೂಡ ವಿಟಮಿನ್ ಡಿ ಪಡೆದುಕೊಳ್ಳಿ; ಇಲ್ಲಿದೆ ಉಪಯುಕ್ತ ಮಾಹಿತಿ | Vitamin D
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಮಾತನಾಡಿದರು.
ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂಬುದನ್ನು ನಾನಿನ್ನು ಬಿಚ್ಚಿಟ್ಟಿಲ್ಲ ಎಂದು ಹರಿಹಾಯ್ದರು.
ಇದನ್ನೂ ಓದಿ:ಎಲ್ಲ ತಾಲೂಕಿನಲ್ಲೂ ಶುಂಠಿ ಖರೀದಿ ಕೇಂದ್ರ ತೆರೆಯಲಿ; ಕಣಗಾಲ್ ಮೂರ್ತಿ ಒತ್ತಾಯ
ಬಿಜೆಪಿಯ ಚಂಗಲು ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾನೆ. ಆತನ ವಿರುದ್ಧ ವಿಧಾನಸೌಧದಲ್ಲಿ ಅತ್ಯಾಚಾರ ಮಾಡಿರುವ ಪ್ರಕರಣಗಳಿವೆ. ಎಲ್ಲವೂ ಸಾಬೀತಾಗುತ್ತಿವೆ. ಆತ ಆಡಿರುವ ಮಾತುಗಳು ಸಾಬೀತಾಗಿವೆ. ಈಗ ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಭ್ರಷ್ಟ ಬಿಜೆಪಿ, ದಳದ ವಿರುದ್ಧ ಹೋರಾಟ ಮಾಡಿ 2028ರಲ್ಲಿ ಮತ್ತೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
ದಳಪತಿ ವಿಜಯ್ ವಿರುದ್ಧ ‘ಫತ್ವಾ’ ಹೊರಡಿಸಿದ ಇಸ್ಲಾಮಿಕ್ ಧರ್ಮಗುರು| Vijay