ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 32 ವರ್ಷ ಹಿಂದಿನ ದಾಖಲೆ ಮುರಿದ ಧೋನಿ

ಮೆಲ್ಬೋರ್ನ್: ಆತಿಥೇಯ ಆಸ್ಟ್ರೇಲಿಯಾ ಎದುರಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಅರ್ಧ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಏಕದಿನ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಾಜಿ ನಾಯಕ ಎಂ.ಎಸ್​. ಧೋನಿ 32 ವರ್ಷದ ಹಿಂದಿನ ದಾಖಲೆಯೊಂದನ್ನು ಮುರಿದಿದ್ದಾರೆ.

ಏಕ ದಿನ ಸರಣಿಯ ಮೂರೂ ಪಂದ್ಯಗಳಲ್ಲಿ ಅರ್ಧ ಶತಕ ಗಳಿಸಿರುವ ಧೋನಿ ಸರಣಿಯಲ್ಲಿ ಒಟ್ಟು 193 ರನ್​ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಈ ಮೂಲಕ ಏಕದಿನ ಸರಣಿಯೊಂದರಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತ ತಂಡದ ಹಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ಶುಕ್ರವಾರ ಧೋನಿ ಪ್ರಶಸ್ತಿ ಸ್ವೀಕರಿಸಿದಾಗ ಅವರ ವಯಸ್ಸು 37 ವರ್ಷ 195 ದಿನ.

1987ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಮಾಜಿ ಕ್ರಿಕೆಟಿಗ ಸುನಿಲ್​ ಗವಾಸ್ಕರ್​ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಆಗ ಅವರ ವಯಸ್ಸು 37 ವರ್ಷ 191 ದಿನ.

ಇದೇ ಸಂದರ್ಭದಲ್ಲಿ 7 ನೇ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಧೋನಿ ಅತಿ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ, ಗಂಗೂಲಿ, ಯುವರಾಜ್​ ಸಿಂಗ್​ ಅವರೊಂದಿಗೆ 2ನೇ ಸ್ಥಾನ ಹಂಚಿಕೊಂಡಿದ್ದಾರೆ. (ಏಜೆನ್ಸೀಸ್​)

One Reply to “ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 32 ವರ್ಷ ಹಿಂದಿನ ದಾಖಲೆ ಮುರಿದ ಧೋನಿ”

Comments are closed.