27.7 C
Bengaluru
Wednesday, January 22, 2020

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್​ ಎಂ.ಎಸ್​.ಧೋನಿ ಇನ್ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆಡುವುದೇ ಇಲ್ಲವಾ? ಕೋಚ್​ ರವಿಶಾಸ್ತ್ರಿ ಹೇಳಿದ್ದೇನು ಗೊತ್ತಾ?

Latest News

ರಾಜ್ಯಮಟ್ಟದ 28ನೇ ಭಜನೆ ಮೇಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ 28ನೇ ಭಜನಾ ಮೇಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯಮಟ್ಟದ ಭಜನಾ...

ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶದಿಂದ ವಾಪಸಾದ ಬಳಿಕ ಸಚಿವ ಸಂಪುಟ ವಿಸ್ತರಣೆ: ಡಿಸಿಎಂ ಅಶ್ವತ್ಥ ನಾರಾಯಣ

ತುಮಕೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ವಿದೇಶದಿಂದ ಬಂಡ ಕೂಡಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್​ ತಿಳಿಸಿದರು. ಇಲ್ಲಿನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...

ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಆದ್ಯತೆ ನೀಡುವೆ ಎಂದ ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ: ರೈತ ಪರ ಕಾಳಜಿಯ ಸಿದ್ಧಗಂಗಾಶ್ರೀಗಳ ಶಿಕ್ಷಣದ ನಿಸ್ವಾರ್ಥ ಸೇವೆಯಿಂದ ಜಗತ್ತೇ ನಾಡನ್ನು ನೋಡುವಂತಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ನಗರದ ಪಬ್ಲಿಕ್...

ಎಲ್ಲ ವರ್ಗದವರಿಗೂ ಲ್ಯಾಪ್​ಟಾಪ್ ವಿತರಿಸಲು ಎನ್​ಎಸ್​ಯುುಐ ಕಾರ್ಯಕರ್ತರ ಒತ್ತಾಯ

ಶಿವಮೊಗ್ಗ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್ ಯೋಜನೆಯನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಂದು ಒತ್ತಾಯಿಸಿ ಎನ್​ಎಸ್​ಯುುಐ...

ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕಿ : ಪಿಎಸ್‌ಐ ಸಣ್ಣ ವೀರೇಶ

ಮಸ್ಕಿ: ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ಗಳನ್ನು ಧರಿಸಿಕೊಳ್ಳಬೇಕು. ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕುವಂತೆ ಪಿಎಸ್‌ಐ ಸಣ್ಣ ವೀರೇಶ ಸೂಚಿಸಿದರು. ಪಟ್ಟಣದ...

ಮುಂಬೈ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್​.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರಾ? ಅವರಿನ್ನು ಯಾವುದೇ ಪಂದ್ಯದಲ್ಲಿ ಆಡುವುದಿಲ್ಲವಾ? ಹೀಗೊಂದು ಅನುಮಾನ ಕ್ರಿಕೆಟ್​ ಪ್ರೇಮಿಗಳಲ್ಲಿ, ಧೋನಿ ಅಭಿಮಾನಿಗಳಲ್ಲಿ ಮೂಡಿದೆ.

ನಿವೃತ್ತಿಯ ಬಗ್ಗೆ ಧೋನಿ ಇನ್ನೂ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿಲ್ಲ. ಆದರೆ 2019ರ ವಿಶ್ವಕಪ್​ನಲ್ಲಿ ಸೆಮಿಫೈನಲ್​ನಲ್ಲಿ ಭಾರತ ಸೋತ ಬಳಿಕ ಧೋನಿ ಯಾವುದೇ ಪಂದ್ಯವನ್ನೂ ಆಡಿಲ್ಲ.

ಈಗ ಟೀಂ ಇಂಡಿಯಾ ಕೋಚ್​ ರವಿಶಾಸ್ತ್ರಿ ಧೋನಿಯವರ ಕ್ರಿಕೆಟ್​ ಜೀವನದ ಬಗ್ಗೆ ಮಾತನಾಡಿದ್ದಾರೆ.

2020ರ ಇಂಡಿಯನ್​ ಪ್ರೀಮಿಯರ್​ ಲೀಗ್​ನಲ್ಲಿ ತಾವು ಆಡಬಹುದು ಎಂದು ಮಾಜಿ ಕ್ಯಾಪ್ಟನ್​ ಎಂ.ಎಸ್​. ಧೋನಿಯವರಿಗೆ ಅನ್ನಿಸಿದರೆ ಖಂಡಿತ ಆಗ ತಂಡಕ್ಕೆ ಮರಳುತ್ತಾರೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಆ ವ್ಯಕ್ತಿ ದಂತಕತೆ. ಸದ್ಯ ಕ್ರಿಕೆಟ್​ನಿಂದ ಬ್ರೇಕ್​ ತೆಗೆದುಕೊಂಡಿದ್ದಾರೆ. ಆದರೆ ಖಂಡಿತ ಮುಂದಿನ ಐಪಿಎಲ್​ಗೆ ತಂಡಕ್ಕೆ ಮರಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ವಿಶ್ವಕಪ್​ ಆದ ಮೇಲೆ ಮಹೇಂದ್ರ ಸಿಂಗ್​ ಧೋನಿ ಅವರು ಜಮ್ಮುಕಾಶ್ಮಿರದಲ್ಲಿ ಭಾರತೀಯ ಸೇನೆಯು ಪ್ಯಾರಾಚೂಟ್ ರೆಜಿಮೆಂಟ್‌ನ (106 ಪ್ಯಾರಾ ಟಿಎ ಬೆಟಾಲಿಯನ್) ತರಬೇತಿ ಪಡೆದರು. ಅದಾದ ಮೇಲೆಯೂ ಸಹ ಕುಟುಂಬದೊಂದಿಗೆ ಕಾಲಕಳೆಯುತ್ತಿದ್ದಾರೆ ಹೊರತು ಕ್ರಿಕೆಟ್​ಗೆ ಮರಳಿಲ್ಲ.

ನನ್ನ ಕ್ರಿಕೆಟ್​ ಜೀವನದ ಬಗ್ಗೆ ಸದ್ಯಕ್ಕೆ ಏನೂ ಪ್ರಶ್ನೆ ಮಾಡಬೇಡಿ ಎಂದು ಧೋನಿ ಮಾಧ್ಯಮದವರನ್ನು ಕೇಳಿಕೊಂಡಿದ್ದಾರೆ. ಹೀಗೆ ಧೋನಿಯವರ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನದ ಬಗ್ಗೆ ಹಲವು ಅನುಮಾನಗಳು ಎದ್ದಿದೆ.

ಈಗ ರವಿ ಶಾಸ್ತ್ರಿಯವರ ಮಾತಿನಿಂದ ಧೋನಿ ಅಭಿಮಾನಿಗಳಲ್ಲಿ ಒಂದು ಹೋಪ್​ ಮೂಡಿದೆ. ಅವರನ್ನು ಐಪಿಎಲ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ತಂಡದಲ್ಲಿ ನೋಡಬಹುದು ಎಂಬ ಆಶಯ ಮೂಡಿದೆ.(ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...