ಯಶಸ್ವಿಯಾಯ್ತು ಧೋನಿ ಮೊಣಕಾಲಿನ ಶಸ್ತ್ರ ಚಿಕಿತ್ಸೆ; ಚೇತರಿಸಿಕೊಳ್ಳುತ್ತಿದ್ದಾರೆ ಸಿಎಸ್​ಕೆ ಕ್ಯಾಪ್ಟನ್

Dhoni
Published on

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿಎಸ್​ಕೆ ತಂಡದ ಸಿಇಒ ಕಾಸಿ ವಿಶ್ವನಾಥನ್ ತಿಳಿಸಿದ್ದಾರೆ.

ಐಪಿಎಲ್ ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಧೋನಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದರು. ಇದೀಗ ಧೋನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್ 31 ರಂದು ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಧೋನಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಇದರಿಂದ ಟೂರ್ನಿಯುದ್ಧಕ್ಕೂ ನೋವು ಅನುಭವಿಸುತ್ತಿದ್ದರು. ಮೈದಾನದಲ್ಲಿ ಕುಂಟುತ್ತಾ ಸಾಗಿದ ಫೋಟೋಗಳು ಸಾಕಷ್ಟು ವೈರಲ್ ಆಗಿತ್ತು. ಆದರೆ ಧೋನಿ ಮಾತ್ರ ತಮ್ಮ ಕಾಲು ನೋವಿನ ಬಗ್ಗೆ ಹೆಚ್ಚು ಗಮನ ನೀಡದೆ, ತಂಡದದತ್ತ ದೃಷ್ಟಿ ಹಾಯಿಸಿದ್ದರು. ಸಿಎಸ್​ಕೆ ಚಾಂಪಿಯನ್ ಆದ ಬೆನ್ನಲ್ಲೇ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net