ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

blank

ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ ಆಗಿ ಸೇವೆಗೈಯುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘಟನೆ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ ಎಂ.ಎಸ್.ಎಂ.. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ 2024(ಅತ್ಯುತ್ತಮ ಸಂಸ್ಥೆ ಹಾಗೂ ವಿಶೇಷ ಅಂಗೀಕಾರ ಪ್ರಶಸ್ತಿ) ಲಭಿಸಿದೆ.

ಇತ್ತೀಚೆಗೆ ನವದೆಹಲಿಯಲ್ಲಿ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಪ್ರಶಸ್ತಿ ಪ್ರದಾನ ಮಾಡಿದರು. ಸ್ಟೇಟ್ ಬ್ಯಾಂಕ್ ಆಫ್‌ಇಂಡಿಯಾ, ಬ್ಯಾಂಕ್‌ಆಫ್ ಬರೋಡಾ, ಬ್ಯಾಂಕ್‌ಆಫ್ ಮಹಾರಾಷ್ಟ್ರ ಹಾಗೂ ಖಾಸಗಿ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹೀಗೆ ದೇಶದ ಇಪ್ಪತ್ತು ಪ್ರತಿಷ್ಠಿತ ಸಂಸ್ಥೆಗಳು ಈ ಪ್ರಶಸ್ತಿಗೆ ಭಾಜನವಾಗಿವೆ.

ದೇಶದ ಎಲ್ಲ ಗ್ರಾಮಗ್ರಾಮಗಳಲ್ಲಿ ಬ್ಯಾಂಕ್‌ಗಳು ತಮ್ಮ ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆ ನೀಡುವುದು ಅಸಾಧ್ಯವೆಂಬುದನ್ನು ಪರಿಗಣಿಸಿದ ವಿತ್ತ ಸಚಿವಾಲಯ ಹಾಗೂ ದೇಶದ ಆರ್ಥಿಕ ನಿಯಂತ್ರಕ ಸಂಸ್ಥೆಗಳು ಆರ್ಥಿಕ ಸೇರ್ಪಡೆ ಕಾರ್ಯಕ್ರಮದಡಿ ವ್ಯಕ್ತಿಗತ ಹಾಗೂ ಆಯ್ದ ಸಂಸ್ಥೆಗಳನ್ನು ಬಿ.ಸಿ.ಯಾಗಿ ನಿಯೋಜಿಸಿಕೊಂಡಿವೆ. ಇದರನ್ವಯ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ್ನು ಬ್ಯಾಂಕ್‌ಗಳು ಎಸ್.ಎಚ್.ಜಿ. ಬ್ಯಾಂಕ್‌ಕ್ರೆಡಿಟ್ ಲಿಂಕೆಜ್ ಪ್ರೋಗ್ರಾಂ(ಸ್ವ ಸಹಾಯಸಂಘಗಳ ಬ್ಯಾಂಕ್ ಸಾಲ ಸೌಲಭ್ಯ ಒದಗಣೆ) ಸೇವೆಗಳನ್ನು ಒದಗಿಸಲು ತನ್ನ ಬಿ.ಸಿ.(ಬ್ಯುಸಿನೆಸ್ ಕರೆಸ್ಪಾಂಡೆನ್ಸ್) ಬ್ಯಾಂಕ್‌ನ ವ್ಯವಹಾರ ಪ್ರತಿನಿಧಿಯಾಗಿ ನಿಯೋಜಿಸಿಕೊಂಡಿವೆ. ತನ್ಮೂಲಕ ಗ್ರಾಮಗ್ರಾಮಗಳಲ್ಲಿ ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ನೇರವಾಗಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿವೆ. ಈ ಮೂಲಕ ಬ್ಯಾಂಕ್‌ನ ಸಾಲ ಸೌಲಭ್ಯಗಳನ್ನು ಗ್ರಾಮಗ್ರಾಮಗಳಿಗೆ ತಲುಪಿಸುವ ಕೆಲಸವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.

ಅತಿ ಕಡಿಮೆ ಬಡ್ಡಿ ದರದ ಸಾಲ

ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ ಇಂದು ಲಕ್ಷಾಂತರ ಕೃಷಿ, ಸ್ವಉದ್ಯೋಗ ಚಟುವಟಿಕೆಗಳನ್ನು ಸೃಷ್ಟಿಸಿವೆ. ಆಮೂಲಕ ಗ್ರಾಮೀಣ ಪ್ರದೇಶದ ರೈತರು, ಬಡವರು, ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಇದರ ಜತೆಗೆ ಗ್ರಾಮೀಣ ಪ್ರದೇಶದ ಯುವಕ, ಯುವತಿಯರಿಗೆ ಬ್ಯಾಂಕ್‌ನಿಂದ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಶೇ.14(ಬ್ಯಾಂಕ್ ಬಡ್ಡಿದರ ಹಾಗೂ ಬ್ಯಾಂಕ್ ನೀಡುವ ಬಿ.ಸಿ.ಸೇವಾಶುಲ್ಕ ಸೇರಿ)ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ, ತರಬೇತಿ ಒದಗಿಸುವ ಮೂಲಕ ಲಕ್ಷಾಂತರ ಮಂದಿಗೆ ಗುಡಿ ಕೈಗಾರಿಕೆಗಳು, ಕಿರುಉದ್ಯಮ, ವ್ಯಾಪಾರ, ಆರ್ಥಿಕ ಚಟುವಟಿಕೆ ಕೈಗೊಳ್ಳಲು ನೆರವಾಗಿದೆ.

ಸಿಡ್ಬಿ ಪ್ರಯಾಸ್‌ನಿಂದ 1,971 ಕೋಟಿ ರೂ. ಹಂಚಿಕೆ

ಗ್ರಾಮಾಭಿವೃದ್ಧಿ ಯೋಜನೆಯು ದೇಶದ ಅತ್ಯಂತ ಪ್ರಮುಖ ಬ್ಯಾಂಕ್ ಆದ ಸಿಡ್ಬಿ (ಖಐಈಆಐ) ಬ್ಯಾಂಕ್‌ನ ಪ್ರಯಾಸ್ ಕಾರ್ಯಕ್ರಮವನ್ನು ಅನುಷ್ಠಾನ ಮಾಡುತ್ತಿದ್ದು ಇದರಡಿ ಅತಿಕಡಿಮೆ ಬಡ್ಡಿದರದಲ್ಲಿ ಕಿರು ಉದ್ಯಮ ಆರಂಭಿಸಲು ಗರಿಷ್ಠ ಮೊತ್ತದ ಸಾಲವನ್ನು ಸಿಡ್ಬಿಯಿಂದ ನೇರವಾಗಿ ಸ್ವಉದ್ಯೋಗ ಘಟಕ ಪ್ರಾರಂಭಿಸುವ ಸದಸ್ಯರಿಗೆ ದೊರಕಿಸಿಕೊಡುತ್ತಿದೆ. ಸಿಡ್ಬಿ ಪ್ರಯಾಸ್ ಕಾರ್ಯಕ್ರಮದ ಮೂಲಕ 56,057 ಸದಸ್ಯರಿಗೆ 1,971 ಕೋಟಿ ರೂ. ಮೊತ್ತದ ಸಾಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಆ ಮೂಲಕ ಸಾವಿರಾರು ಮಂದಿ ಗ್ರಾಮೀಣ ಪ್ರದೇಶದ ಯುವಕಯುವತಿಯರು ವ್ಯಾಪಾರ, ಕಿರು ಉದ್ಯಮಗಳನ್ನು ಆರಂಭಿಸುವ ಮೂಲಕ ಸ್ವಾವಲಂಬಿ ಬದುಕನ್ನು ಸಾಗಿಸುತ್ತಿದ್ದಾರೆ.

ಅಂಧತ್ವದಲ್ಲೂ ಅದ್ಭುತ ಕ್ರಿಕೆಟ್ ರಾಜ್ಯ ಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿ

ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…