More

    ಜೀವನದಲ್ಲಿ ಯಾವುದೂ ಶಾಶ್ವತವಲ್ಲ: ಸಚಿವ ಎಂಟಿಬಿ ನಾಗರಾಜ್ ಅಭಿಮತ

    ಜಡಿಗೇನಹಳ್ಳಿ: ಜೀವನದಲ್ಲಿ ಯಾವುದೂ ಶಾಶ್ವತವಲ್ಲ. ನಮ್ಮ ಉಸಿರು ಇರುವಾಗ ನಾವು ಮಾಡಿದ ಒಳ್ಳೆಯ ಕೆಲಸಗಳಷ್ಟೇ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂದು ಪೌರಾಡಳಿತ ಮತ್ತು ಸಣ್ಣಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಹೇಳಿದರು.


    ಹೊಸಕೋಟೆ ತಾಲೂಕು ಜಡಿಗೇನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯಲ್ಲಿ ಸೋಮವಾರ 50-54 ವಿಶೇಷ ಅನುದಾನದಡಿ 15 ಲಕ್ಷ ರೂ.ವೆಚ್ಚದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.


    ಪಲಾಪೇಕ್ಷೆಯಿಲ್ಲದೆ ಹೊಸಕೋಟೆ ಕ್ಷೇತ್ರಕ್ಕೆ ಬಂದೆ, ಕ್ಷೇತ್ರದ ಜನರಿಗೆ ಒಳಿತು ಮಾಡಬೇಕು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸಿನಲ್ಲಿ ಉಳಿಯಬೇಕು ಎಂಬ ಸದುದ್ದೇಶದಿಂದ ರಾಜಕೀಯ ಪ್ರವೇಶಿಸಿದೆ ಹೊರತು ಸ್ವಾರ್ಥ ಸಾಧನೆಗಲ್ಲ, ದೇವರು ನನಗೆ ಎಲ್ಲವನ್ನೂ ಕೊಟ್ಟಿದ್ದಾನೆ. ಹಣ ಮಾಡಬೇಕೆಂಬ ಉದ್ದೇಶ ನನಗಿಲ್ಲ ಎಂದು ಪುನರುಚ್ಚರಿಸಿದರು.


    ಕ್ಷೇತ್ರದಲ್ಲಿ ಈ ಹಿಂದೆ ತಾಂಡವಾಡುತ್ತಿದ್ದ ಅರಾಜಕತೆ, ದೌರ್ಜನ್ಯಕ್ಕೆ ಇತಿಶ್ರೀ ಹಾಡಿ ಜನ ನೆಮ್ಮದಿ ಜೀವನ ನಡೆಸುವಂತೆ ಮಾಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಆ ಆತ್ಮತೃಪ್ತಿ ನನಗಿದೆ ಎಂದು ಹೇಳಿದರು.ಗ್ರಾಮೀಣ ಭಾಗಗಳ ಅಭಿವೃದ್ಧಿ ನಮ್ಮ ದೇಶವೇ ಗ್ರಾಮೀಣ ಭಾಗಗಳಿಂದ ಕೂಡಿದ ಭೂಪ್ರದೇಶವಾಗಿದೆ. ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ನಮ್ಮ ಹಿರಿಯರು ಸಾರಿ ಹೇಳಿದ್ದರು. ಅದೇ ರೀತಿ ಹೊಸಕೋಟೆ ಕ್ಷೇತ್ರದ ಎಲ್ಲ ಹೋಬಳಿಯಲ್ಲಿ ಗ್ರಾಪಂ ಮಟ್ಟದಿಂದಲೂ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಒತ್ತು ನೀಡಲಾಗಿದೆ ಎಂದು ಸಚಿವರು ತಿಳಿಸಿದರು.


    ವಿಧಾನ ಪರಿಷತ್ ಸದಸ್ಯರ ಅನುದಾನ, ಸರ್ಕಾರದ ವಿಶೇಷ ಅನುದಾನ ಸೇರಿ ವಿವಿಧ ಅನುದಾನಗಳ ಮೂಲಕ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮತ್ತಷ್ಟು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಹೆಚ್ಚಿನ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಹೇಳಿದರು.

    ಕಾಮಗಾರಿ ಆರಂಭಿಸಲು ಆದ್ಯತೆ: ಕಾಮಗಾರಿಗಳಿಗೆ ಕೇವಲ ಭೂಮಿಪೂಜೆ ನೆರವೇರಿಸಿ ಕೈಬಿಟ್ಟು ಬಿಡುವುದಲ್ಲ, ಆದಷ್ಟೂ ಬೇಗ ಕಾಮಗಾರಿಗಳು ಆರಂಭವಾಗುವಂತೆ ನೋಡಿಕೊಳ್ಳಬೇಕು, ಜತೆಗೆ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಯುವಂತೆ ಗುತ್ತಿಗೆದಾರರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಅಭಿವೃದ್ಧಿ ಕಾಮಗಾರಿಗಳಲ್ಲಿ ಮುಖ್ಯವಾಗಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು. ಅಧಿಕಾರಿಗಳು ಕಾಮಗಾರಿ ನಡೆಯುವ ವೇಳೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು, ಗುಣಮಟ್ಟದಲ್ಲಿ ರಾಜಿಯಾಗದೆ ಪ್ರ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಕಾಮಗಾರಿಗಳಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರಹೊಣೆ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts