More

    ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಿರೇ? ಸುಧಾಕರ್​ಗೆ ಎಂಟಿಬಿ ಪ್ರಶ್ನೆ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸುಧಾಕರ್ ಟ್ವೀಟ್ ಬೆನ್ನಲ್ಲೇ ಮಾಜಿ ಸಚಿವ್ ಎಸ್​.ಟಿ.ಸೋಮಶೇಖರ್ ಟ್ವೀಟ್ ಮಾಡುತ್ತಿದ್ದಂತೆ ಚರ್ಚೆಯ ಕಾವು ಇನ್ನಷ್ಟು ಹೆಚ್ಚಾಗುತ್ತಾ ತೊಡಗಿತು. ಇದೀಗ ಮಾಜಿ ಸಚಿವ ಎಂಟಿಬಿ ನಾಗರಾಜ್ ಟ್ವೀಟ್ ಮಾಡುವ ಮೂಲಕ ಇಬ್ಬರು ಮಾಜಿ ಸಚಿವರ ಹೇಳಿಕೆಯನ್ನು ಅಲ್ಲಗಳೆಯುತ್ತಾ, ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

    ಮಾಜಿ ಸಚಿವರಾದ ಸುಧಾಕರ್, ಇಂದು ಸಿದ್ದರಾಮಯ್ಯ ಅವರ ಬಗ್ಗೆ ಟ್ವಿಟರ್​ನಲ್ಲಿ ಆಡಿರುವ ಮಾತುಗಳು ಸತ್ಯಕ್ಕೆ ದೂರವಾದುದು. ಸುಧಾಕರ್ ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಎಂದು ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ.

    ಅಲ್ಲದೇ, ಬಿಜೆಪಿ ಸೇರಲು ಸಿದ್ದರಾಮಯ್ಯ ಅವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು, ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಎಂಟಿಬಿ ನಾಗರಾಜ್ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.

    ಸುಧಾಕರ್ ಟ್ವೀಟ್​ನಲ್ಲಿ ಏನಿದೆ?

    2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ. ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಎಚ್​.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಸುಧಾಕರ್ ಟ್ವೀಟ್ ಮಾಡಿದ್ದರು.

    ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ತಮ್ಮ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಸುಧಾಕರ್ ಪ್ರಶ್ನಿಸಿದ್ದರು.

    ಸಿದ್ದರಾಮಯ್ಯನವರ ಅಸಹಾಯಕತೆ ಪಕ್ಷ ಬಿಡಲು ಪ್ರೇರಣೆ!

    ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ. ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು ಎಂದು ಸುಧಾಕರ್ ಬೆನ್ನಲ್ಲೇ ಎಸ್​.ಟಿ.ಸೋಮಶೇಖರ್ ಟ್ವೀಟ್ ಮಾಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts