

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ದಿಂದ ಒಂದೇ ದಿನ ನೂರಕ್ಕೂ ಹೆಚ್ಚು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಬದಲಿ ನಿವೇಶನ ಹಂಚಿಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲನೆ ಮಾಡುವಾಗ ಈ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಮುಖ್ಯವಾಗಿ ಪ್ರಭಾವಿಗಳಿಗೆ ಪ್ರತಿಷ್ಠಿತ ಬಡಾವಣೆಗಳಲ್ಲಿ ಬದಲಿ ನಿವೇಶನ ನೀಡಲಾಗಿದ್ದು, ಅಕ್ರಮದ ವಾಸನೆ ಕಂಡುಬಂದಿದೆ ಎನ್ನಲಾಗಿದೆ.
ಸರ್ಕಾರದ ಆದೇಶದಲ್ಲಿ ಸಾಕಷ್ಟು ಲೋಪವಿದ್ದು, 50:50 ಅನುಪಾತದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. 50:50 ಅನುಪಾತದ ಆದೇಶಕ್ಕೆ ಸಂಬಂಧಿಸಿದಂತೆ ಅಧಿಕೃತ ದಾಖಲಾತಿಗಳು ಇಲ್ಲ ಎಂಬ ಮಾತುಗಳು ಕೇಳಿ ಬಂದಿದೆ.